ತಂಬಾಕು ವಿರೋಧಿ ದಿನಾಚರಣೆ, ಕಾರ್ಯಾಗಾರ

New Project (4)
Published on

ಕಡಬ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ಹಾಗೂ ಆಲಂಕಾರು ಶ್ರೀ ದುಗಾರ್ಂಬಾ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ, ಮಾಹಿತಿ ಕಾರ್ಯಾಗಾರ ನಡೆಯಿತು.

ಕಾಲೇಜು ಅಧ್ಯಕ್ಷ ದಯಾನಂದ ರೈ ಮನವಳಿಕೆ ಕಾರ್ಯಾಗಾರ ಉದ್ಘಾಟಿಸಿದರು. ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯ ಉಪನ್ಯಾಸಕ ಮನೋಹರ ಎ. ಜಾಗೃತಿ ಮೂಡಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು ಅಧ್ಯಕ್ಷ ಮಹೇಶ್ ಕೆ. ಸವಣೂರು ಅಧ್ಯಕ್ಷತೆ ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಲಂಕಾರು ವಲಯಾಧ್ಯಕ್ಷ ಇಂದುಶೇಖರ ಶೆಟ್ಟಿ, ಆಲಂಕಾರು ಶ್ರೀ ದುಗಾರ್ಂಬಾ ಪದವಿ ಪೂರ್ವ ಕಾಲೇಜು ಆಡಳಿತಾಧಿಕಾರಿ ಶ್ರೀಪತಿ ರಾವ್, ಶ್ರೀ ದುಗಾರ್ಂಬಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ರೂಪಾ ಜಿ., ಪ್ರೌಢಶಾಲಾ ವಿಭಾಗ ಮುಖ್ಯ ಶಿಕ್ಷಕಿ ನವೀನ್ ಕುಮಾರ್ ರೈ, ಆಲಂಕಾರು ಒಕ್ಕೂಟದ ಅಧ್ಯಕ್ಷೆ ಶಾರದಾ ಶುಭಹಾರೈಸಿದರು. ಸೇವಾ ಪ್ರತಿನಿಧಿ ಸವಿತಾ, ಪ್ರೇಮಾ, ಜನಜಾಗೃತಿ ವೇದಿಕೆ ಸದಸ್ಯರಾದ ಮಮತಾ ಅಂಬರ್ಜೆ, ಮೀನಾಕ್ಷಿ, ಕುಂತೂರು ಒಕ್ಕೂಟ ಅಧ್ಯಕ್ಷ ಲಕ್ಷ್ಮೀಶ ಶೆಟ್ಟಿ, ಚೆನ್ನಕೇಶವ ಮೊದಲಾದವರಿದ್ದರು. ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಸ್ವಾಗತಿಸಿದರು. ಉಪನ್ಯಾಸಕಿ ನಿವ್ಯಾ ನಿರೂಪಿಸಿದರು. ವಲಯ ಮೇಲ್ವಿಚಾರಕಿ ಸುಜಾತಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net