ಮಹನೀಯರ ತತ್ವಾದರ್ಶ ಸಮಾಜಕ್ಕೆ ದಾರಿದೀಪ

202
Published on

ಹಿರಿಯೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶ ಇಂದಿನ ಸಮಾಜಕ್ಕೆ ದಾರಿದೀಪ ಎಂದು ನಗರಸಭೆ ಅಧ್ಯಕ್ಷ ಅಜಯ್‌ಕುಮಾರ್ ಹೇಳಿದರು.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿನ ಶೋಷಣೆಯನ್ನು ಖಂಡಿಸಿ ಸಮಾಜವನ್ನು ಅಭಿವೃದ್ಧಿಯ ಪಥಕ್ಕೆ ತಂದ ಮಹಾಪುರುಷರು ಎಂದರು.

ಬಸವಣ್ಣ, ದಯಾನಂದ ಸರಸ್ವತಿ, ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದ ಮುಂತಾದ ದಾರ್ಶನಿಕರಂತೆ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಚರಿತ್ರೆಯನ್ನು ಇಂದಿನ ಯುವ ಜನತೆ ತಿಳಿಯಬೇಕು ಎಂದರು.

ತಹಸೀಲ್ದಾರ್ ರಾಜೇಶ್‌ಕುಮಾರ್, ನಗರಸಭೆ ಸದಸ್ಯ ಜಗದೀಶ್, ಮುಖಂಡರಾದ ಶ್ರೀನಿವಾಸ್, ತಿಪ್ಪೇಸ್ವಾಮಿ, ಚನ್ನಕೇಶವ, ಶ್ರೀನಿವಾಸ್ ರೆಡ್ಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net