90 ದಿನದಲ್ಲಿ ಉದ್ದಿಮೆದಾರರ ಮನೆ ಬಾಗಿಲಿಗೆ ಬರಲಿದೆ ಎನ್‌ಒಸಿ

Murugesh Nirani
Murugesh Nirani
Published on

ಬೆಂಗಳೂರು: ಕಂದಾಯ, ಸಾರಿಗೆ, ಅರಣ್ಯ ಮತ್ತು ಪರಿಸರ ಇಲಾಖೆ ಒಳಗೊಂಡ ಏಕಗವಾಕ್ಷಿ ಪದ್ಧತಿ ಜಾರಿಗೆ ತಂದು ಉದ್ಯಮಿಗಳ ಮನೆ ಬಾಗಿಲಿಗೆ 90 ದಿನದಲ್ಲಿ ನಿರಾಕ್ಷೇಪಣಾ ಪತ್ರ (NOC) ತಲುಪಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಷರ್ಸ್ ಅಸೋಸಿಯೇಷನ್‌ನಿಂದ ಕಲ್ಲು ಗಣಿ ಉದ್ಯಮಿಗಳಿಗೆ ಹಮ್ಮಿಕೊಂಡಿದ್ದ ಸುರಕ್ಷತಾ ಅಭಿಯಾನ ಉದ್ಘಾಟಿಸಿ ಮಾತನಾಡಿದರು. ಉದ್ಯಮೆದಾರರು ಇಲಾಖೆಯಿಂದ ಇಲಾಖೆಗೆ ಅಲೆಯುವುದನ್ನು ತಪ್ಪಿಸಲು ಮಂಗಳೂರಿನಲ್ಲಿ ಹಾಗೂ ರಾಜ್ಯದ ನಾಲ್ಕು ಕಂದಾಯ ಭಾಗಗಳಲ್ಲಿ ಗಣಿ ಅದಾಲತ್ ನಡೆಸಲಾಗುವುದು ಎಂದರು.

ಏಕಕಂತು ತಿರುವಳಿ ಯೋಜನೆ: ಉದ್ದಿಮೆದಾರರಿಂದ ಸುಮಾರು 6,700 ಕೋಟಿ ರೂ. ರಾಜಸ್ವ ಸರ್ಕಾರಕ್ಕೆ ಬರಬೇಕಾಗಿದೆ. ಇನ್ನು ಮುಂದೆ ಏಕಕಂತು ತಿರುವಳಿ ಯೋಜನೆ (ಒನ್ ಟೈಮ್ ಸಟ್ಲುಮೆಂಟ್ ಸ್ಕೀಮ್) ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಗಣಿ ನಿಧಿ (ಡಿಎಂಎ್) ಪ್ರಸ್ತುತ ಶೇ.30ರಷ್ಟಿದೆ. ಇದನ್ನು ಶೇ.10ಕ್ಕೆ ಇಳಿಕೆ ಮಾಡಬೇಕೆಂಬ ಬೇಡಿಕೆಯನ್ನು ಸರ್ಕಾರದ ಮುಂದಿಡುವುದಾಗಿ ಹೇಳಿದರು.

ಜನಸ್ನೇಹಿ ನೀತಿ: ಶೀಘ್ರದಲ್ಲೇ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಜನಸ್ನೇಹಿ ಗಣಿ ನೀತಿ ಜಾರಿ ಮಾಡಲಿದ್ದೇವೆ. ಇದರಲ್ಲಿ ನಿಮ್ಮ ಪ್ರತಿನಿಧಿಗಳನ್ನು ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net