

ಬೆಂಗಳೂರು: ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಘೆ ರೋಗಿಗಳ ಚಿಕಿತ್ಸೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದೆ.
ಕೆ.ಸಿ. ಜನರಲ್ ಆಸ್ಪತ್ರೆಗೆ ಡಾ. ಸುರೇಶ್ (ದೂ: 99861 21101), ಸರ್ ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆಗೆ ಡಾ. ಕವಿತಾ ಗೌತಮ್ (90085 94651), ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಡಾ. ಕೆ.ಆರ್. ದೇವೆಂದ್ರಪ್ಪ (98805 71367),ಯಲಹಂಕ ಸಾರ್ವಜನಿಕ ಆಸ್ಪತ್ರೆಗೆ ಡಾ. ಗಣೇಶ್ (99800 25323), ಕೆ.ಆರ್. ಪುರ ಸಾರ್ವಜನಿಕ ಆಸ್ಪತ್ರೆಗೆ ಡಾ. ಅಶೋಕ್ ರೆಡ್ಡಿ (70223 29578) ಹಾಗೂ ವಾಣಿವಿಲಾಸ ಆಸ್ಪತ್ರೆಗೆ ಡಾ. ರವಿಶಂಕರ್ (94494 87592) ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
ಡೆಂಘೆಗೆ ಸಂಬಂಧಿಸಿದ ಮಾಹಿತಿಗೆ ಸಾರ್ವಜನಿಕರಿಗಾಗಿ ಉಚಿತ ಸಹಾಯವಾಣಿ ಸಂಖ್ಯೆ 1800 425 8330ಕ್ಕೆ ಸಂಪರ್ಕಿಸುವಂತೆ ಇಲಾಖೆ ತಿಳಿಸಿದೆ.