ಸ್ಥಳೀಯ ಸಂಸ್ಥೆಗಳಿಗೆ ನಾಮನಿರ್ದೇಶನ ಮಾಡಿ

Untitled design (1)
ರಮೇಶ್ ಛಲವಾದಿ
Published on

ಹೊಸಪೇಟೆ: ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳಿಗೆ ಸಮುದಾಯದ ನಾಯಕರನ್ನು ಸರ್ಕಾರ ನಾಮನಿರ್ದೇಶನ ಮಾಡಬೇಕು ಎಂದು ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ರಮೇಶ್ ಛಲವಾದಿ ಆಗ್ರಹಿಸಿದರು.


ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಛಲವಾದಿ ಸಮುದಾಯ ರಾಜಕೀಯವಾಗಿ ಮುಖ್ಯವಾಹಿನಿಗೆ ಬರಬೇಕಿದೆ. ಜಿಲ್ಲೆಯ ಶೇ.80 ಛಲವಾದಿ ಸಮುದಾಯದ ಜನರು ಸದಾ ಕಾಂಗ್ರೆಸ್ ಪಕ್ಷವನ್ನೇ ಬೆಂಬಲಿಸುತ್ತಾ ಬಂದಿದ್ದಾರೆ. ಕೆಲವರು ದಶಕಗಳಿಂದ ಕಾಂಗ್ರೆಸ್‌ನಲ್ಲಿ ದುಡಿಯುತ್ತಿದ್ದರೂ, ಯಾವುದೇ ರೀತಿಯಲ್ಲಿ ರಾಜಕೀಯ ಪ್ರಾತಿನಿಧ್ಯ ದೊರೆಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಈ ಬಾರಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಬಂದಿದ್ದರಿಂದ ನಮ್ಮ ಸಮುದಾಯದ ನಾಯಕರನ್ನು ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರ, ವಿವಿಧ ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಿಗೆ ನಾಮನಿರ್ದೇಶನ ಮಾಡಬೇಕು.

ಈ ಸಂಬಂದ ಶೀಘ್ರವೇ ಜಿಲ್ಲಾ ಛಲವಾದಿ ಮಹಾಸಭಾದ ಪ್ರಮುಖರ ನಿಯೋಗ ಬೆಂಗಳೂರಿಗೆ ತೆರಳಿ ಗೃಹ ಸಚಿವರೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ,ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹಾದೇವಪ್ಪ, ಡಾ.ಜಿ.ಪಮರೇಶ್ವರ್ ಅವರಿಗೆ ಮನವಿ ಸಲ್ಲಿಸುವುದಾಗಿ ತಿಳಿಸಿದರು. ಮಹಾಸಭಾದ ಮುಖಂಡರಾದ ಸಿ.ಹನುಮೇಶ, ಚನ್ನಬಸವ ಮಾನ್ವಿ, ಲಕ್ಷ್ಮೀಕಾಂತ ಸುಗ್ಗನಹಳ್ಳಿ, ಶ್ರೀನಿವಾಸ ಛಲವಾದಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net