

ಹುಬ್ಬಳ್ಳಿ: ಇಲ್ಲಿಯ ಕೆಎಲ್ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ 36 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪ್ರಾಚಾರ್ಯ ಡಾ. ಲಿಂಗರಾಜ ಸಿ. ಮುಳ್ಳಳ್ಳಿ ಅವರನ್ನು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಾಡಲಾಗಿದೆ.
ಕವಿವಿಯಲ್ಲಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಅವರನ್ನು ಕೆಎಲ್ಇ ಪರಿವಾರ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.