ದಾಖಲೆಗಾಗಿ ಮುಗಿಬಿದ್ದ ಆಕಾಂಕ್ಷಿಗಳು

web 2
Published on

ಕಡೂರು: ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಗ್ರಾಪಂ ಚುನಾವಣೆ ನಡೆಯುವುದರಿಂದ ಸೋಮವಾರದಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ. ಹಾಗಾಗಿ ಆಕಾಂಕ್ಷಿಗಳು ಜಾತಿ ಪ್ರಮಾಣ ಪತ್ರ ಪಡೆಯಲು ಮುಗಿಬಿದ್ದಿದ್ದಾರೆ.

ಸೋಮವಾರದಿಂದ ತಾಲೂಕಿನ 49 ಗ್ರಾಪಂಗಳಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಗ್ರಾಪಂ ಚುನಾವಣೆ ಆಕಾಂಕ್ಷಿಗಳಿಗೆ ಜಾತಿ, ಆದಾಯ ಪ್ರಮಾಣ ಪತ್ರ ನೀಡಲು ತಾಲೂಕು ಆಡಳಿತ ಪ್ರತ್ಯೇಕ ಕೌಂಟರ್ ಆರಂಭಿಸಿದೆ. ಈಗಾಗಲೇ ಹಲವು ಆಕಾಂಕ್ಷಿಗಳು ಆಸ್ತಿ ತೆರಿಗೆ, ಜಾತಿ ಪ್ರಮಾಣ ಪತ್ರ ಸೇರಿ ನಾಮಪತ್ರ ಸಲ್ಲಿಕೆಗೆ ಚುನಾವಣಾ ಆಯೋಗ ನಿಗಪಡಿಸಿದ ಅಗತ್ಯ ದಾಖಲೆ ಸಂಗ್ರಹದಲ್ಲಿ ನಿರತರಾಗಿದ್ದಾರೆ.

ನಾಮಪತ್ರ ಸಲ್ಲಿಸುವ ವೇಳೆ ಆಕಾಂಕ್ಷಿಗಳಿಗೆ ಜಾತಿ ಪ್ರಮಾಣ ಪತ್ರ ಪಡೆಯಲು ವಿಳಂಬವಾಗದಂತೆ ಪ್ರತ್ಯೇಕ ಕೌಂಟರ್ ತೆರೆಯಲಾಗಿದೆ. ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರು ಜತೆಗೆ ಇತರೆ ಸಿಬ್ಬಂದಿ ಮೂಲ ದಾಖಲೆ ಪರಿಶೀಲನೆ ನಡೆಸಿ ನಂತರ ಜಾತಿ ಪ್ರಮಾಣ ಪತ್ರ ನೀಡಲಾಗುವುದು ಎಂದು ತಹಸೀಲ್ದಾರ್ ಜೆ.ಉಮೇಶ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net