

ರಾಯಚೂರು: ರಾಯಚೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಜಿ.ಕುಮಾರನಾಯಕ ಜಿಲ್ಲಾ ಚುನಾವಣಾಕಾರಿ ಹಾಗೂ ಚಂದ್ರಶೇಖರ ನಾಯಕಗೆ ಬುಧವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಕಾರಿ ಅಶೋಕ ದುಡಗುಂಟಿ, ಪಕ್ಷದ ಮುಖಂಡರಾದ ಮಹ್ಮದ್ ಶಾಲಂ, ಎಂ.ಈರಣ್ಣ, ಶ್ರೀಕಾಂತರಾವ್ ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆಗೆ ಕೇವಲ ಎರಡು ದಿನಗಳು ಮಾತ್ರ ಬಾಕಿ ಉಳಿದಿದ್ದು, ಇದುವರೆಗೂ ಆರು ಜನರಿಂದ ಏಳು ನಾಮಪತ್ರಗಳು ಸಲ್ಲಿಕೆಯಾಗಿದೆ. ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ, ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರನಾಯಕ ಗುರುವಾರ ಮೆರವಣಿಗೆ ಮೂಲಕ ಆಗಮಿಸಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.