21 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಮಂಡಳಿಯ ಚುನಾವಣೆ ಜೂ. 20ರಂದು ನಡೆಯಲಿದ್ದು, 21 ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರಗಳು ಕ್ರಮಬದ್ಧವಾಗಿವೆ.
ಒಕ್ಕೂಟವು ಉತ್ತರ ಕನ್ನಡ, ಗದಗ, ಧಾರವಾಡ ಜಿಲ್ಲೆಗಳ ವ್ಯಾಪ್ತಿ ಹೊಂದಿದೆ. ಜೂ. 14ರಿಂದ ಆರಂಭವಾಗಿರುವ ಚುನಾವಣೆ ಪ್ರಕ್ರಿಯೆಯಲ್ಲಿ ಜೂ. 22ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿತ್ತು. ಈ ಅವಧಿಯಲ್ಲಿ ಸಲ್ಲಿಸಿದ ಅಭ್ಯರ್ಥಿಗಳ ಎಲ್ಲ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿ ಡಾ. ಸಂತೋಷ ಬಿರಾದಾರ ತಿಳಿಸಿದ್ದಾರೆ.
ಗದಗ ಮತ್ತು ನರಗುಂದ ತಾಲೂಕು ಕ್ಷೇತ್ರದಿಂದ ಒಬ್ಬರು ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಆ ಕ್ಷೇತ್ರಕ್ಕೆ ಬಹುತೇಕ ಅವಿರೋಧ ಆಯ್ಕೆಯಾದಂತಾಗಿದೆ. ನಾಮಪತ್ರ ಹಿಂಪಡೆಯಲು ಜೂ. 24ರ ಮಧ್ಯಾಹ್ನ 3ರವರೆಗೆ ಅವಕಾಶವಿದ್ದು, ನಂತರದಲ್ಲೇ ಅಂತಿಮ ಉಮೇದುವಾರರ ಪಟ್ಟಿ ಪ್ರಕಟವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net