

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಇನ್‌ಸ್ಟೈರ್ ಮಾನಕ್ ಪ್ರಶಸಿಗಾಗಿ ನಾಮಿನೇಷನ್‌ಗಳನ್ನು ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು 2023 ನೇ ಸಾಲಿನಲ್ಲಿ 6ನೇ ತರಗತಿಯಿಂದ 10 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲ ಪಠ್ಯಕ್ರಮದ ಎಲ್ಲ ಸರ್ಕಾರಿ/ ಅನುದಾನಿತ/ ಅನುದಾನರಹಿತ/ಕೇಂದ್ರೀಯ/ನವೋದಯ ಶಾಲೆಗಳ ವಿದ್ಯಾರ್ಥಿಗಳಿಂದ ಅವರಲ್ಲಿರುವ ನಾವೀನ್ಯ ಐಡಿಯಾಗಳನ್ನು ಆನ್ ಲೈನ್‌ನಲ್ಲಿ ಶಾಲಾ ಲಾಗಿನ್ ಮೂಲಕ ನಾಮಿನೇಟ್ ಮಾಡಲು ಅವಕಾಶ ಕಲ್ಪಿಸಿದೆ.
ಆಯ್ಕೆಯಾದ ಐಡಿಯಾಗಳಿಗೆ ವಿದ್ಯಾರ್ಥಿಗಳ ಖಾತೆಗೆ 10000 ರೂ. ವರ್ಗಾವಣೆ ಮಾಡುವುದರ ಮೂಲಕ ಅವರಲ್ಲಿರುವ ವೈಜ್ಞಾನಿಕ ಮನೋಭಾವವನ್ನು ಪ್ರೋತ್ಸಾಹಿಸಲಾಗುತ್ತದೆ (ಐ್ಞಜ್ಟಿಛಿ ಅಡಿಚ್ಟ). ವಿದ್ಯಾರ್ಥಿಗಳು / ಪೋಷಕರು ಅವರು ವ್ಯಾಸಂಗ ಮಾಡುತ್ತಿರುವ ಶಾಲೆಯ ಮುಖ್ಯ ಶಿಕ್ಷಕರನ್ನು ಸಂಪರ್ಕಿಸಿ ಹೆಚ್ಚಿನ ವಿವರ ಪಡೆಯಬಹುದಾಗಿದೆ. ನಾಮಿನೇಟ್ ಮಾಡಲು ಆಗಸ್ಟ್ 31 ಕಡೆಯದಿನವಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.