

ನರಗುಂದ: ರಾಷ್ಟ್ರವೂ ಬಾಲ ಕಾರ್ವಿುಕ ಪದ್ಧತಿ ನಿಮೂಲನೆಯತ್ತ ಹೆಜ್ಜೆ ಹಾಕುತ್ತಿದ್ದು, ಆ ದಿಸೆಯಲ್ಲಿ ಮತ್ತಷ್ಟು ಪರಿಣಾಮಕಾರಿ ಕಾರ್ಯಗಳು ಆಗಬೇಕಿವೆ ಎಂದು ಕೊಣ್ಣೂರಿನ ಕೆಇಎಸ್ ಶಿಕ್ಷಣ ಸಂಸ್ಥೆ ಪ್ರಾಚಾರ್ಯ ಕೆ.ಎಂ. ಮಾಕಣ್ಣವರ ಹೇಳಿದರು.
ತಾಲೂಕಿನ ಕೊಣ್ಣೂರ ಗ್ರಾಮದ ಕೆಇಎಸ್ ಸಂಯುಕ್ತ ಪದವಿಪೂರ್ವ ಕಾಲೇಜ್ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಬಾಲ ಕಾರ್ವಿುಕ ವಿರೋಧಿ ದಿನಾಚರಣೆಯಲ್ಲಿ ಅವರು ಮಾತನಾಡಿದರು. 14 ವರ್ಷದೊಳಗಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು. ಶಾಲೆಗೆ ಹೋಗುವುದನ್ನು ಯಾರೊಬ್ಬರೂ ತಪ್ಪಿಸಬಾರದು. ಬಾಲ ಕಾರ್ವಿುಕ ಪದ್ಧತಿ ನಿಮೂಲನೆಗೆ ಸರ್ಕಾರದ ಜತೆಗೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸಿದರೆ ಮಾತ್ರ ಬಾಲ ಕಾರ್ವಿುಕ ಪದ್ಧತಿ ನಿಮೂಲನೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು.
ಶಾಲಾ ಮಕ್ಕಳಿಗೆ ಬಾಲ ಕಾರ್ವಿುಕ ಪದ್ಧತಿ ವಿರೋಧಿ ದಿನಾಚರಣೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಎಂ.ಡಿ. ಚಲವಾದಿ, ಎಚ್.ಎಸ್. ಶಿವಪ್ಪಯ್ಯನಮಠ ಮಾತನಾಡಿದರು. ಎಸ್.ಎಂ. ಚವ್ಹಾಣ, ಬಿ.ಎಫ್. ಕರಿಗಾರ, ಶಾಲೆಯ ಶಿಕ್ಷಕ ಸಿಬ್ಬಂದಿ, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.