ನೂಲ್ವಿ ಬಿ.ಇಡಿ ಕಾಲೇಜಿನಲ್ಲಿ ಸ್ನೇಹ ಸಮ್ಮೇಳನ

IMG-20250928-WA0012-1.jpg
Published on

ಹುಬ್ಬಳ್ಳಿ: ತಾಲೂಕಿನ ನೂಲ್ವಿ ಗ್ರಾಮದ ಶ್ರೀ ಜಗದ್ಗುರು ರೇಣುಕಾಚಾರ್ಯ ಬಿ.ಇಡಿ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ದೀಪದಾನ ಸಮಾರಂಭ ಇತ್ತೀಚೆಗೆ ನಡೆಯಿತು.

ಅತಿಥಿಗಳಾಗಿದ್ದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಡಾ. ಎಚ್.ವಿ. ಬೆಳಗಲಿ ಅವರು ದೀಪದಾನ ಪ್ರತಿಜ್ಞಾವಿಧಿ ಬೋಧಿಸಿದರು. ಗುರುವಿಗಿಂತ ಶ್ರೇಷ್ಠವಾದ ಸ್ಥಾನ ಸಮಾಜದಲ್ಲಿ ಯಾವುದೂ ಇಲ್ಲ ಎಂದು ಅಭಿಪ್ರಾಯಪಟ್ಟರು.

ಬಿವಿಬಿ ಸಿವಿಲ್ ವಿಭಾಗದ ಮುಖ್ಯಸ್ಥ ಡಾ. ಎಂ.ಆರ್. ಪಾಟೀಲ್, ಪತ್ರಕರ್ತ ಗುರುರಾಜ ಹೂಗಾರ ಅವರನ್ನು ಸತ್ಕರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಡಾ. ಎ.ಬಿ. ಬಂಡಿವಾಡ, ವಿದ್ಯಾರ್ಥಿ ಸಂಘದ ಕಾರ್ಯಾಧ್ಯಕ್ಷೆ ಕಾವ್ಯಾ ಪಿ.ಜಿ. ಪ್ರಾಸ್ತಾವಿಕವಾಗಿ ಮಾತನಾಡಿದರು.
ಉಮಾ ಸಾರೆ, ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು. ಅಶ್ವಿನಿ ನಾಯಕ ಸ್ವಾಗತಿಸಿದರು, ಅಶ್ವಿನಿ ಆರ್. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net