ಈಶಾನ್ಯ ಪದವಿಧರ ಚುನಾವಣೆಗೆ ಸಿದ್ಧ

pressmeet
ಎಂ.ಎಸ್.ದಿವಾಕರ
Published on

ಹೊಸಪೇಟೆ: ಈಶಾನ್ಯ ಪದವಿಧರ ಚುನಾವಣೆ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ 6 ತಾಲೂಕಿನಲ್ಲಿ ಒಟ್ಟು 21 ಮತಗಟ್ಟೆ ಕೇಂದ್ರಗಳಲ್ಲಿ, 18 ಸಾವಿರ ಮತದಾರರು ಜೂ.3ರಂದು ತಮ್ಮ ಹಕ್ಕು ಚಲಾಯಿಸಲಿದ್ದಾರೆ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಳೆದ ಪದವಿಧರ ಚುನಾವಣೆಯಲ್ಲಿ ಜಿಲ್ಲೆಯ 15 ಮತಗಟ್ಟೆ ಕೇಂದ್ರಗಳು, 5880 ಮತದಾರರಿದ್ದರು. ಈ ಬಾರಿಯ ಜಿಲ್ಲೆಯ 6 ತಾಲೂಕಿನ 21 ಮತಗಟ್ಟೆ ಕೇಂದ್ರಗಳ 18233 ಮತದಾರರು ಹಕ್ಕು ಚಲಾಯಿಸಲಿದ್ದಾರೆ ಎಂದರು.

ಆಯೋಗದ ನಿರ್ದೇಶನದಂತೆ ಜಿಲ್ಲೆಯ 21 ಮತಗಟ್ಟೆ ಕೇಂದ್ರಗಳ ಮಾಹಿತಿಯನ್ನು ಮತದಾರದಾರರಿಗೆ ನೀಡಲಾಗಿದೆ. ಮತದಾರ ಚೀಟಿ ವಿತರಣೆ ಮಾಡಲಾಗಿದೆ. ಮತಗಟ್ಟೆ ಕೇಂದ್ರಗಳ ಕ್ಯೂಆರ್ ಕೋಡ್ ಜಾರಿ ಮಾಡಲಾಗಿದೆ. ಮತ ಚಲಾವಣೆ ಕುರಿತು ಜಿಲ್ಲಾ ಮಟ್ಟದ ಸ್ವೀಪ್ ಸಮಿತಿಯಿಂದ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜಿಲ್ಲಾದ್ಯಾಂತ ಮತಗಟ್ಟೆ ಇರುವ ಪ್ರದೇಶದ ವ್ಯಾಪ್ತಿಯಲ್ಲಿ ಚುನಾವಣೆ ಶಾಂತಿಯುತವಾಗಿ ಮತದಾನ ನಡೆಸಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದರು.

ಪದವಿಧರ ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ಖಾಯಂ ಅಥವಾ ದಿನಗೂಲಿ ಕೆಲಸ ನಿರ್ವಹಿಸುವ ಮತದಾರರಿಗೆ ಜೂ.03ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಆದೇಶಿಸಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಅನುರಾಧಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net