ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಅಭಯಚಂದ್ರ

abaya
Published on

ಮಂಗಳೂರು: ಕಳೆದ ಬಾರಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದೇನೆ. ನನಗೆ ವಯಸ್ಸೂ ಆಗಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ತಿಳಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪದ್ಮಶ್ರೀ ಪುರಸ್ಕೃತ ಕ್ರೀಡಾಪಟು ಮಿಲ್ಖಾ ಸಿಂಗ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸಂತಾಪ ಸೂಚನೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಯುವಕರಿಗೆ ಅವಕಾಶ ಸಿಗಬೇಕಾಗಿದೆ. ಆಗ ಪಕ್ಷ ಬೆಳೆಯಲು ಸಾಧ್ಯ. ನನ್ನ ಕ್ಷೇತ್ರದಲ್ಲಿ ಮಿಥುನ್ ರೈಯಂಥ ಯುವಕರಿಗೆ ಅವಕಾಶ ನೀಡಬೇಕು. ಕಾಂಗ್ರೆಸ್‌ನ ಎಲ್ಲ ಹಿರಿಯ ನಾಯಕರು ಈ ನಿಟ್ಟಿನಲ್ಲಿ ಮನಸ್ಸು ಮಾಡಬೇಕು ಎಂದು ತಿಳಿಸಿದರು.

ನಾಲ್ಕು ಬಾರಿ ಶಾಸಕರಾಗಿರುವ ಜೈನ್ ಕಳೆದ ಬಾರಿಯೇ ಯುವಕರಿಗೆ ಅವಕಾಶ ನೀಡಲೆಂದು ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಹೇಳಿದ್ದರಾದರೂ, ಕೊನೇ ಕ್ಷಣದಲ್ಲಿ ವರಿಷ್ಠರ ಒತ್ತಡಕ್ಕೆ ಮಣಿದು ನಿರ್ಧಾರ ಬದಲಾಯಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net