ಆಹಾರ ನಿಯಂತ್ರಣಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

nrp 1 (5)
Published on

ಎನ್.ಆರ್.ಪುರ: ಈ ಹಿಂದಿನ ಸಭೆಯಲ್ಲಿ ಆಹಾರ ಮತ್ತು ಗುಣಮಟ್ಟ ನಿಯಂತ್ರಣ ಅಧಿಕಾರಿ ವಾರಕ್ಕೊಮ್ಮೆ ತಾಲೂಕಿಗೆ ಭೇಟಿ ನೀಡಿ, ತಾಲೂಕು ವೈದ್ಯಾಧಿಕಾರಿಗಳಿಗೆ ವರದಿ ನೀಡಬೇಕು ಎಂದು ಸೂಚಿಸಿದ್ದರೂ ಕೂಡ ಇದೂವರೆಗೂ ಬಂದಿಲ್ಲ ಅವರ ಮೇಲೆ ಶಿಸ್ತು ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಿರಿ ಎಂದು ಶಾಸಕ ಟಿ.ಡಿ.ರಾಜೇಗೌಡ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಕೆ.ಓ.ನರಸಿಂಹಮೂರ್ತಿಗೆ ಸೂಚಿಸಿದರು.

ತಾಪಂ ಸಾಮರ್ಥ್ಯ ಸೌಧದಲ್ಲಿ ನಡೆದ ತ್ರೈ ಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿ, ಈ ಹಿಂದೆ ಬಿ.ಎಚ್.ಕೈಮರದ ಾಸ್ಟ್ ುಡ್ ಸೆಂಟರ್‌ನಲ್ಲಿ ಕರಿದ ಎಣ್ಣೆ ಬಳಸುತ್ತಾರೆ ಎಂಬ ದೂರು ಕೇಳಿಬಂದ ಹಿನ್ನಲೆಯಲ್ಲಿ, ಸಭೆಗೆ ಆಹಾರ ಮತ್ತು ಗುಣಮಟ್ಟ ನಿಯಂತ್ರಣ ಅಧಿಕಾರಿಯನ್ನು ಸಭೆಗೆ ಕರೆಸಿ ದೂರಿನ ಬಗ್ಗೆ ಪರಿಶೀಲಿಸಿ ಕೂಡಲೇ ಕ್ರಮಕೈಗೊಳ್ಳಬೇಕು ಹಾಗೂ ವಾರಕ್ಕೊಮ್ಮೆ ತಾಲೂಕಿಗೆ ಭೇಟಿ ನೀಡಿ, ವಿವಿಧ ಾಸ್ಟ್ ುಡ್ ಸೆಂಟರ್, ಹೋಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಲಾಗಿತ್ತು ಅದರೂ ನಿರ್ಲಕ್ಷ್ಯವಹಿಸಿದ ಅಧಿಕಾರಿ ಮೇಲೆ ಶಿಸ್ತು ಕ್ರಮಕ್ಕೆ ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಆಹಾರ ಸುರಕ್ಷತಾ ಇಲಾಖೆಗೆ ಪತ್ರ ಬರೆಯುವಂತೆ ಸೂಚಿಸಿದರು.

ಡಾ.ಕೆ.ಓ.ನರಸಿಂಮೂರ್ತಿ ಮಾತನಾಡಿ, ಕ್ಷಯ ರೋಗ ಬಗ್ಗೆ ಇಲಾಖೆ ತೀವ್ರ ನಿಗಾ ವಹಿಸಿ ಕಡ್ಡಾಯವಾಗಿ ಕ ಪರೀಕ್ಷೆ ಮಾಡಲಾಗುತ್ತಿದೆ. ತಾಲೂಕಿನಲ್ಲಿ 52 ಜನ ಕ್ಷಯ ರೋಗಿಗಳು ಪತ್ತೆಯಾಗಿದ್ದಾರೆ ಎಂದು ಸಭೆಗೆ ತಿಳಿಸಿದರು. ತಾಪಂ ಆಡಳಿತಾಧಿಕಾರಿ ಇ.ಶಿವಶಂಕರ್, ನೋಡಲ್ ಅಧಿಕಾರಿ ಚಂದ್ರಶೇಖರ್, ನಾಮ ನಿರ್ದೇಶಿತ ಸದಸ್ಯರಾ ಮಾಳೂರುದಿಣ್ಣೆರಮೇಶ್, ಶಮೀರಾ, ಶಶಿಕುಮಾರ್, ಗೇರ್‌ಬೈಲ್‌ಪ್ರವೀಣ್, ಅಂಜುಂ, ಕೆ.ಎ.ಸಾಜು, ಕೆ.ಎಂ.ಸುಂದರೇಶ್, ಎಸ್.ಡಿ.ರಾಜೇಂದ್ರ, ಎಸ್.ಗೋಪಾಲ್, ಸಂದೀಪ ಹೆಮ್ಮೂರು, ಚಂದ್ರಮ್ಮ, ಇಒ ಎಚ್.ಡಿ.ನವೀನ್‌ಕುಮಾರ್, ತಹಸೀಲ್ದಾರ್ ತನುಜ.ಟಿ.ಸವದತ್ತಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಪಿಡಿಓ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net