ನಿಗದಿತ ಸ್ಥಳದಲ್ಲಿ ಮಾತ್ರ ಫ್ಲೆಕ್ಸ್ ಅಳವಡಿಕೆಗೆ ಸೂಚನೆ

b.c.basavaraj
ಬಿ.ಸಿ.ಬಸವರಾಜ್
Published on

ಚಿಕ್ಕಮಗಳೂರು: ನಗರ ಸಭೆಯ ವ್ಯಾಪ್ತಿಯಲ್ಲಿ ರಸ್ತೆ, ಸರ್ಕಲ್‌ಗಳಲ್ಲಿ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್‌ಗಳನ್ನು ಹಾಕಬಾರದು. ನಗರಸಭೆಯಲ್ಲಿ ನಿರ್ಣಯವಾಗಿರುವ ಐದು ಭಾಗಗಳಲ್ಲಿ ಮಾತ್ರ ಹಾಕುವಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಂಘ-ಸಂಸ್ಥೆಗಳಿಗೆ ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್ ಸೂಚನೆ ನೀಡಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲೆಂದರಲ್ಲಿ ಫ್ಲೆಕ್ಸ್ ಹಾಗೂ ಬಂಟಿಂಗ್ಸ್ ಹಾಕುತ್ತಿರುವುದರಿಂದ ಸಾರ್ವಜನಿಕರಿಗೆ ಓಡಾಡಲು ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಸ್ಥಳವನ್ನು ನಿಗದಿಮಾಡಿ ನಿರ್ಣಯ ಮಾಡಲಾಗಿದೆ ಎಂದು ತಿಳಿಸಿದರು.
ಕೆಲವು ರಸ್ತೆಗಳಲ್ಲಿ ಫ್ಲೆಕ್ಸ್, ಕಟೌಟ್ ಇಡುತ್ತಿರುವುದರಿಂದ ಅಪಘಾತಗಳು ಹೆಚ್ಚಾಗುತ್ತಿವೆ. ಆದ್ದರಿಂದ ನಗರಸಭೆ ಅನುಮತಿ ಪಡೆಯದೆ ಅಳವಡಿಸಬಾರದು. ಪ್ರತಿ ಫ್ಲೆಕ್ಸ್ ಹಾಕಲು ದಿನವೊಂದಕ್ಕೆ 110 ರೂ.ನಿಗದಿಪಡಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net