ದುರಸ್ತಿ ಶೀಘ್ರ ಪೂರ್ಣಗೊಳಿಸಲು ಸೂಚನೆ

nrp ac visit
ಎನ್.ಆರ್.ಪುರ ಸರ್ಕಾರಿ ಆಸ್ಪತ್ರೆಯಲ್ಲಿ ಎಸಿ ಕಾಂತರಾಜ್ ರೋಗಿಗಳ ಆರೋಗ್ಯ ವಿಚಾರಿಸಿದರು. ತನುಜಾ ಟಿ. ಸವದತ್ತಿ, ಎಚ್.ಡಿ.ನವೀನ್‌ಕುಮಾರ್, ಡಾ. ವಿಜಯಕುಮಾರ್, ಡಾ. ವೀರಪ್ರಸಾದ್, ಡಾ. ಲಿಂಗರಾಜ್ ಇತರರಿದ್ದರು.
Published on

ಎನ್.ಆರ್.ಪುರ: ಆಸ್ಪತ್ರೆ ಕಟ್ಟಡ ಮೇಲ್ಛಾವಣಿ ಸೋರುತ್ತಿದ್ದು, ದುರಸ್ತಿ ಕಾರ್ಯ ಶೀಘ್ರ ಪೂರ್ಣಗೊಳಿಸುವಂತೆ ಎಸಿ ಕಾಂತರಾಜ್ ಹೇಳಿದರು.

ಗುರುವಾರ ಸರ್ಕಾರಿ ಆಸ್ಪತ್ರೆಯಲ್ಲಿ ಪರಿಶೀಲಿಸಿ, ರೋಗಿಗಳ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯ ಎಲ್ಲ ವಿಭಾಗಗಳನ್ನೂ ಪ್ರತ್ಯೇಕವಾಗಿ ಪರಿಶೀಲಿಸಿ ಆಗಿರುವ ಸಮಸ್ಯೆಗಳನ್ನು ಆಲಿಸಿ, ತಾಲೂಕು ಆರೋಗ್ಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ರೋಗಿಗಳಿಗೆ ಯಾವುದೇ ರೀತಿ ತೊಂದರೆಯಾಗದ ರೀತಿಯಲ್ಲಿ ತುರ್ತಾಗಿ ಕ್ರಮ ಕೈಗೊಳ್ಳಲು ಸಹಕಾರ ನೀಡುವುದಾಗಿ ತಿಳಿಸಿದರು.
ತಹಸೀಲ್ದಾರ್ ತನುಜಾ ಟಿ. ಸವದತ್ತಿ, ಆಡಳಿತ ವೈದ್ಯಾಧಿಕಾರಿ ಡಾ. ವಿಜಯಕುಮಾರ್, ತಾಪಂ ಇಒ ಎಚ್.ಡಿ.ನವೀನ್‌ಕುಮಾರ್, ವೈದ್ಯರಾದ ಡಾ. ವೀರಪ್ರಸಾದ್, ಡಾ. ಲಿಂಗರಾಜ್, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಎಲ್ದೋಸ್, ರಾಜಸ್ವ ನಿರೀಕ್ಷಕ ಮಂಜುನಾಥ್, ಗ್ರಾಮ ಆಡಳಿತ ಅಧಿಕಾರಿ ಸಾನಿಯಾತಾಜ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದರ್ಶನ್, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net