ಕಲಾವಿದರ ಮೇಲೆ ಹಲ್ಲೆ ಆರೋಪ - ಕಾರಣ ಕೇಳಿ ಅಧಿಕಾರಿಗೆ ನೋಟಿಸ್ ಜಾರಿ

Kannada Bhavana
Published on

ಬೆಂಗಳೂರು: ಕಲಾವಿದರ ಮೇಲೆ ಹಲ್ಲೆ ಮತ್ತು ಜಾತಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ. ಗಾಯಿತ್ರಿ ಅವರಿಗೆ ಇಲಾಖೆ ಕಾರ್ಯದರ್ಶಿ ಎಂ.ವಿ. ವೆಂಕಟೇಶ್ ನೋಟಿಸ್ ನೀಡಿದ್ದಾರೆ.

ಕಲಾವಿದರು ತಮ್ಮನ್ನು ಭೇಟಿ ಮಾಡುವ ಸಂದರ್ಭದಲ್ಲಿ ಜಾತಿ ನಿಂದನೆ ಮಾಡಿ, ಹಲ್ಲೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಕಲಾವಿದ ಜೋಗಿಲ ಸಿದ್ಧರಾಜು ಅವರು ಘಟನೆ ಕುರಿತು ಎಸ್.ಜೆ. ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಬೇಕು ಎಂದು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಉಪಯೋಜನೆಯ ಲೆಕ್ಕಶೀರ್ಷಿಕೆಯಡಿ ಧನಸಹಾಯ ಯೋಜನೆ ಮತ್ತು ಪ್ರಾಯೋಜನೆಗೆ ಹಂಚಿಕೆ ಮಾಡಿ, ಲಭ್ಯವಿರುವ 1.59 ಕೋಟಿಯನ್ನು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬ್ಯಾಂಕ್ ಖಾತೆಯಲ್ಲಿ ಕಾಯ್ದಿರಿಸಲಾಗಿದೆ. ಈ ಅನುದಾನವನ್ನು ಪ್ರಾಯೋಜನೆಗೆ ಬಳಸಲು ಅನುಮತಿ ನೀಡಲಾಗಿದ್ದರೂ ಬಳಕೆ ಮಾಡಿಲ್ಲದಿರುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಹಾಗಾಗಿ ಆಯುಕ್ತರು 2025-26ನೇ ಸಾಲಿಗೆ ಇಲಾಖೆಯ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು 2.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಅನುದಾನದಲ್ಲಿ ಅನುಷ್ಠಾನ ಮಾಡಲಾದ ಯೋಜನೆ ಮತ್ತು ಕಾರ್ಯಕ್ರಮಗಳ ವಿವರ ಸಲ್ಲಿಸುವಂತೆ ಹೇಳಿದ್ದಾರೆ.

ಅನುದಾನ ಬಿಡುಗಡೆ:

ಪರಿಶಿಷ್ಟ ಜಾತಿ ಉಪಯೋಜನೆಯಡಿ 2022-23, 2023-24 ಹಾಗೂ 2024-25ನೇ ಸಾಲಿಗೆ ಕಲಾ ತಂಡಗಳಿಗೆ ಬಾಕಿ ಇರುವ ಗೌರವ ಸಂಭಾವನೆ ಪಾವತಿಗೆ ಸಂಬಂಧಿಸಿದಂತೆ 1.29 ಕೋಟಿ ಅನುದಾನ ಬಿಡುಗಡೆ ಮಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ. ಗಾಯಿತ್ರಿ ಆದೇಶ ಹೊರಡಿಸಿದ್ದಾರೆ. ಪರಿಶಿಷ್ಟ ಪಂಗಡ ಉಪಯೋಜನೆಯಡಿಯೂ 40.10 ಲಕ್ಷ ಅನುದಾನ ಬಿಡುಗಡೆಗೊಳಿಸಿ, ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net