ಪಿಡಿಒ, ಎಂಜಿನಿಯರ್ ಗೆ ನೋಟಿಸ್ ಜಾರಿ

Oplus_131072
Oplus_131072
Published on

ನಂಜನಗೂಡು: ನರೇಗಾ ಕಾಮಗಾರಿಯನ್ನು ಜೆಸಿಬಿ ಮೂಲಕ ಮಾಡಿಸಿದ ಹಿನ್ನೆಲೆಯಲ್ಲಿ ನೇರಳೆ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ತಾಂತ್ರಿಕ ಎಂಜಿನಿಯರ್‌ಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜೆರಾಲ್ಡ್ ರಾಜೇಶ್ ಸೋಮವಾರ ನೋಟಿಸ್ ಜಾರಿ ಮಾಡಿದ್ದಾರೆ.

ತಾಲೂಕಿನ ನೇರಳೆ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಯನ್ನು ಸ್ಥಳೀಯ ಗ್ರಾಮ ಪಂಚಾಯಿತಿ ಜನಪ್ರತಿನಿಧಿಯೊಬ್ಬರು ಜೆಸಿಬಿ ಯಂತ್ರದ ಮೂಲಕ ಮಾಡಿಸಲಾಗಿತ್ತು. ಈ ಬಗ್ಗೆ ಮಾರ್ಚ್ 22ದಂದು ವಿಸ್ತೃತವಾಗಿ ವಿಜಯವಾಣಿ ಪತ್ರಿಕೆಯಲ್ಲಿ ವರದಿ ಮಾಡಲಾಗಿತ್ತು. ಈ ವರದಿಗೆ ಸ್ಪಂದಿಸಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜರಾಲ್ಡ್ ರಾಜೇಶ್ ಅವರು ಪಿಡಿಒ ಮತ್ತು ಗ್ರಾಮ ಪಂಚಾಯತಿ ತಾಂತ್ರಿಕ ಎಂಜಿನಿಯರ್ ಪ್ರವೀಣ್ ಅವರಿಗೆ ಕಾರಣ ಕೇಳಿ ಸೋಮವಾರ ನೋಟಿಸ್ ಜಾರಿ ಮಾಡಿದ್ದಾರೆ. ಒಂದು ದಿನದೊಳಗೆ ನೋಟಿಸ್‌ಗೆ ಉತ್ತರ ನೀಡುವಂತೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net