

ಬೆಂಗಳೂರು ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯದಲ್ಲಿ ವ್ಯಾಸಂಗ ಮಾಡಿ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರಗಳನ್ನು ಪಡೆಯದ ಅಭ್ಯರ್ಥಿಗಳು, ಡಿ.21ರೊಳಗೆ ತಮ್ಮ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳನ್ನು ಪಡೆಯಲು ವಿವಿ ಅವಕಾಶ ಮಾಡಿಕೊಟ್ಟಿದೆ.
2003-04 ರಿಂದ 2021-22ರ ವರೆಗೆ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಅಭ್ಯಸಿಸಿ ತಮ್ಮ ಅಂಕಪಟ್ಟಿಗಳನ್ನು ಮತ್ತು 1991 ರಿಂದ 2021ರ ಅವಧಿಯಲ್ಲಿನ ಪದವಿ ಪ್ರಮಾಣ ಪತ್ರವನ್ನು ಸ್ವೀಕಾರ ಮಾಡದೇ ಇರುವವರಿಗೆ ವಿಶೇಷ ಅವಕಾಶ ಕಲ್ಪಿಸಿದೆ.
ಜ್ಞಾನಭಾರತಿ ಆವರಣದಲ್ಲಿರುವ ದೂರಶಿಕ್ಷಣ ನಿರ್ದೇಶನಾಲಯದ ಕಚೇರಿಯಲ್ಲಿ ರು ಡಿ.21ರವರೆಗೆ ಬೆಳಗ್ಗೆ 10.30ರಿಂದ ಸಂಜೆ 5 ಗಂಟೆಯವರೆಗೆ ವಿತರಿಸಲಾಗುವುದು. ವಿದ್ಯಾರ್ಥಿಗಳು ದೂರಶಿಕ್ಷಣ ವಿಭಾಗದಿಂದ ನೀಡಿರುವ ಗುರುತಿನ ಚೀಟಿ ಹಾಗೂ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ ಅಂಕಪಟ್ಟಿ ಹಾಗೂ ಪದವಿ ಪ್ರಮಾಣ ಪತ್ರವನ್ನು ಪಡೆಯಬಹುದು ಎಂದು ತಿಳಿಸಿದೆ.