

ಕಾರವಾರ: ಮೇರಿ ಮಾಟಿ ಮೇರಿ ದೇಶ ಅಭಿಯಾನದ ಮುಂದುವರಿದ ಭಾಗವಾಗಿ ಎಲ್ಲೆಡೆ ಅಮೃತ ಕಳಶ ಯಾತ್ರೆಯನ್ನು ಯಶಸ್ವಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಸೂಚಿಸಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ನನ್ನ ಮಣ್ಣು, ನನ್ನ ದೇಶ ಕಾರ್ಯಕ್ರಮವನ್ನು ಆಚರಿಸಲಾಗಿತ್ತು.
ಇದನ್ನೂ ಓದಿ: ಪ್ರವಾಸೋದ್ಯಮ ದಿನದ ಅಂಗವಾಗಿ ವಿವಿಧ ಸ್ಪರ್ಧೆಗಳು
ಈಗ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಮಣ್ಣು ಅಥವಾ ಅಕ್ಕಿಯನ್ನು ಸಂಗ್ರಹಿಸಲಾಗಿದೆ. ಅದನ್ನು ಕಳಶವೊಂದರಲ್ಲಿ ತುಂಬಿಸಿ ಸೆ. 30 ರೊಳಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮೆರವಣಿಗೆಯ ಮೂಲಕ ತಾಲೂಕು ಮಟ್ಟದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಳಿಸಿಕೊಡಬೇಕು. ಯಾತ್ರೆಯ ಕುರಿತು ಬ್ಯಾನರ್ ಗಳನ್ನು ಅಳವಡಿಸಿ ಅರಿವು ಮೂಡಿಸಬೇಕು. ಫೋಟೋಗಳನ್ನು ಕೇಂದ್ರ ಸರ್ಕಾರದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿ ಪ್ರಮಾಣಪತ್ರ ಪಡೆಯಬಹುದು ಎಂದರು.
ಎಸಿಗಳಾದ ಜಯಲಕ್ಷ್ಮಿ ರಾಯಕೋಡ, ಆರ್.ದೇವರಾಜ್, ಕಲ್ಯಾಣಿ ಕಾಂಬಳೆ,ಡಾ.ನಯನಾ ಎನ್., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲ ವರ್ಗೀಸ್, ನೆಹರು ಯುವ ಕೇಂದ್ರದ ಜಿಲ್ಲಾ ಸಂನ್ವಯಾಽಕಾರಿ ಯಶ್ವಂತ ಯಾದವ, ತಾಪಂ ಇಒಗಳು, ತಹಸೀಲ್ದಾರು ವೇದಿಕೆಯಲ್ಲಿದ್ದರು.