ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಜೀತ ಪದ್ಧತಿ ನಿರ್ಮೂಲನಾ ದಿನ ಆಚರಣೆಗೆ ಸೂಚನೆ

BLY-7-6
ಮಹಮ್ಮದ್ ಜುಬೇರ್
Published on

ಬಳ್ಳಾರಿ: ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆ.9 ರಂದು ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಆಚರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಜುಬೇರ್ ತಿಳಿಸಿದ್ದಾರೆ.

ಜೀತ ಪದ್ಧತಿಯಲ್ಲಿ ಹಾಗೂ ವರ್ತಮಾನದಲ್ಲಿ ಮಾನವ ಕಳ್ಳ ಸಾಗಾಣಿಕೆ ಇಂತಹ ಮಾನವ ಹಕ್ಕುಗಳ ಉಲ್ಲಂಘನೆ ಅಪರಾಧ ತಡೆಗಳಿಗಾಗಿ ಜೀತ ಪದ್ಧತಿ ಕಾಯ್ದೆ 1976 ಯನ್ನು ದೇಶಾದ್ಯಂತ ಜಾರಿ ಮಾಡಲು 1976ರಲ್ಲಿ ಅಂದಿನ ರಾಷ್ಟ್ರಪತಿಗಳು ಅಂಕಿತ ಹಾಕಿರುತ್ತಾರೆ. ಅಂದಿನಿಂದ ರಾಜ್ಯದಲ್ಲಿ ಜೀತ ಪದ್ಧತಿ ನಿರ್ಮೂಲನೆಗಾಗಿ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆಯನ್ನು ಆಚರಿಸುವ ಸಂಬಂಧ 2023ರ ಫೆ.18 ರಂದು ಕರ್ನಾಟಕ ಗೆಜೆಟ್‌ನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಆದ್ದರಿಂದ ಜಿಲ್ಲೆಯ ಎಲ್ಲ ಕಚೇರಿಗಳಲ್ಲಿ ಕಡ್ಡಾಯವಾಗಿ ಫೆ.9 ರಂದು ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಆಚರಿಸಬೇಕು ಎಂದು ಪ್ರಕಟಣೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net