ಶೀಘ್ರ ರಸ್ತೆ ಗುಂಡಿ ಮುಚ್ಚುವಂತೆ ಸೂಚನೆ

ಶೀಘ್ರ ರಸ್ತೆ ಗುಂಡಿ ಮುಚ್ಚುವಂತೆ ಸೂಚನೆ
Published on

ಸಿದ್ದಾಪುರ: ಮಾಲ್ದಾರೆ ಗ್ರಾಮದ ರಸ್ತೆಗಳು ಹದಗೆಟ್ಟಿದ್ದು, ಮಾಲ್ದಾರೆಯಿಂದ ಕಾಡಂಗಡಿ, ಜನತಾ ಕಾಲನಿ, ಗುಡ್ಡರು, ಚೆನ್ನಂಗಿ, ಚೆನ್ನಯ್ಯನ ಕೋಟೆ, ಪಾಲಿಬೆಟ್ಟ, ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಹಾಳಾಗಿ ದಶಕ ಕಳೆದರೂ ಅಭಿವೃದ್ಧಿ ಕಾಣದ ಹಿನ್ನೆಲೆ ನಂ.1 ಕನ್ನಡ ದಿನಪತ್ರಿಕೆ ‘ವಿಜಯವಾಣಿ’ ಆಗಸ್ಟ್ 27ರಂದು ಅಯ್ಯೋ ಪ್ರಾಬ್ಲಂ ಕಣ್ರೀ ಕಾಲಂನಲ್ಲಿ ದಶಕ ಕಳೆದರೂ ಅಭಿವೃದ್ಧಿ ಕಾಣದ ಮಾಲ್ದಾರೆ ರಸ್ತೆ ಶೀರ್ಷಿಕೆ ಅಡಿ ವರದಿ ಪ್ರಕಟಿಸಿತ್ತು. ವರದಿ ಪ್ರಕಟವಾದ ತಕ್ಷಣ ಮಂಗಳವಾರ ವಿರಾಜಪೇಟೆ ತಾಲೂಕು ತಹಸೀಲ್ದಾರ್ ರಾಮಚಂದ್ರ ಮಾಲ್ದಾರೆಯ ಮುಖ್ಯ ರಸ್ತೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಳೆಹಾನಿ ಪರಿಹಾರ ನಿಧಿ ಹಣದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ನಡೆಸುವಂತೆ ಇಂಜಿನಿಯರ್‌ಗೆ ಸೂಚಿಸಿದರು.

ನಂತರ ವಿಜಯವಾಣಿಯೊಂದಿಗೆ ಮಾತನಾಡಿ, ಜೂನ್ ಮತ್ತು ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ತಾಲೂಕಿನ ಬಹುತೇಕ ರಸ್ತೆಗಳು ಹಾಳಾಗಿದ್ದು, ಎಲ್ಲವನ್ನೂ ಪಟ್ಟಿಮಾಡಿ ಸರ್ಕಾರಕ್ಕೆ ಕಳುಹಿಸಲಾಗಿದೆ. ಶೀಘ್ರದಲ್ಲಿ ರಸ್ತೆ ಕಾಮಗಾರಿಗೆ ಕ್ರಮ ವಹಿಸುವುದಾಗಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net