

ಹುಬ್ಬಳ್ಳಿ: ನಗರದ ಉಣಕಲ್ ಶ್ರೀ ಸಿದ್ದಪ್ಪಜ್ಜನ ಮೂಲಗದ್ದುಗೆ ಮಠದಲ್ಲಿ ಸಾಯಿನಗರ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕ ಮಹೇಶ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಯಿತು.
ಜನಸಂಪರ್ಕ ರಸ್ತೆ ಇದೆಉ. ನಿತ್ಯ ನೂರಾರು ವಾಹನಗಳು ಸಂಚರಿಸುತ್ತಿವೆ. ಸ್ಥಳೀಯರ ಒತ್ತಾಸೆಯಂತೆ ಬರುವ ಜನವರಿಯಲ್ಲಿ ಜರುಗಲಿರುವ ಸಿದ್ದಪ್ಪಜ್ಜನ ಜಾತ್ರೆಯೊಳಗೆ ಸಾಯಿನಗರ ರಸ್ತೆ ಕಾಮಗಾರಿ ಪೂರ್ಣಗೊಳಿಸುವ ಭರವಸೆಯನ್ನು ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಆಯುಕ್ತರು ನೀಡಿದ್ದಾರೆ. ಈ ಭಾಗದ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡುವ ಮೂಲಕ ಗುಣಮಟ್ಟದ ರಸ್ತೆಯ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಶಾಸಕರು ತಿಳಿಸಿದರು.
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಕ್ರಮ ಜರುಗಿಸಲು ಶಾಸಕರು ಸೂಚಿಸಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಪಾಲಿಕೆ ಸದಸ್ಯರಾದ ಉಮೇಶಗೌಡ ಕೌಜಗೇರಿ, ರಾಜಣ್ಣ ಕೊರವಿ, ತಿಪ್ಪಣ್ಣ ಮಜ್ಜಗಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಉಪಸ್ಥಿತರಿದ್ದರು.