ಮೀಟರ್ ಬಡ್ಡಿ ದಂಧೆ ನಿಮೂಲನೆಗೆ ಸೂಚನೆ

4 MND 1
Published on

ಮುಂಡಗೋಡ: ತಾಲೂಕಿನಲ್ಲಿ ಮೀಟರ್ ಬಡ್ಡಿ ದಂಧೆ ಸಂಪೂರ್ಣ ನಿಮೂಲನೆ ಮಾಡಬೇಕು ಎಂದು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ಮಂಗಳವಾರ ಹೇಳಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ತಡರಾತ್ರಿ ಪೊಲೀಸರು ಮೀಟರ್ ಬಡ್ಡಿ ದಂಧೆ ನಡೆಸುವವರ ಮೆನೆಗಳ ಮೇಲೆ ದಾಳಿ ನಡೆಸಿ ಹತ್ತಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ. ಆದರೆ, ಮೀಟರ್ ಬಡ್ಡಿ ದಂಧೆ ಮಾಡುವ ಪ್ರಮುಖರು ಓಡಿ ಹೋಗಿದ್ದಾರೆ. ಪೊಲೀಸರು ದಾಳಿ ಮಾಡುವ ಮಾಹಿತಿ ಸೋರಿಕೆಯಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಎಷ್ಟು ದಿನ ಓಡಿ ಹೋಗುತ್ತಾರೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಪರವಾನಗಿ ಇಲ್ಲದೆ ಫೈನಾನ್ಸ್ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮೀಟರ್ ಬಡ್ಡಿ ದಂಧೆ ಮುಂಡಗೋಡದಲ್ಲಿ ಸಂಪೂರ್ಣ ನಾಶವಾಗಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net