ವೋಟರ್​ ಐಡಿ ಪತ್ತೆ ಪ್ರಕರಣ ಸಂಬಂಧ ಮುನಿರತ್ನಗೆ ಹೈಕೋರ್ಟ್ ನೋಟಿಸ್

ಮುನಿರತ್ನ
Published on

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದಲ್ಲಿ ನಕಲಿ ವೋಟರ್ ಐಡಿ ಪತ್ತೆ ಪ್ರಕರಣ ಸಂಬಂಧ ದಾಖಲಾಗಿರುವ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮಾಜಿ ಶಾಸಕ ಮುನಿರತ್ನಗೆ ನೋಟಿಸ್ ಜಾರಿ ಮಾಡಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಜಾಲಹಳ್ಳಿಯ ಅಪಾರ್ಟ್​ವೆುಂಟ್​ನಲ್ಲಿ ಪತ್ತೆಯಾದ ನಕಲಿ ವೋಟರ್ ಐಡಿ ಪ್ರಕರಣದಲ್ಲಿ ಪೊಲೀಸರು ಸರಿಯಾದ ತನಿಖೆ ನಡೆಸಲಿಲ್ಲ. ಈ ಪ್ರಕರಣವನ್ನು ಸಿಬಿಐಗೆ ವಹಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆನಂದ್​ಕುಮಾರ್ ಮತ್ತು ಸಂತೋಷ್​ಕುಮಾರ್ ಪಿಐಎಲ್ ಸಲ್ಲಿಸಿದ್ದಾರೆ. ಮಂಗಳವಾರ ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ನಗರ ಪೊಲೀಸ್ ಆಯುಕ್ತರು, ಜಾಲಹಳ್ಳಿ ಇನ್​ಸ್ಪೆಕ್ಟರ್, ಮುನಿರತ್ನ ಹಾಗೂ ಸಿಬಿಐಗೆ ನೋಟಿಸ್ ಜಾರಿ ಮಾಡಲು ಆದೇಶಿಸಿ ಜೂ.2ಕ್ಕೆ ವಿಚಾರಣೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net