15 ದಿನಗಳ ಒಳಗೆ ಡಿಪಿಆರ್ ಸಲ್ಲಿಸಲು ಸೂಚನೆ

Notice to submit DPR within 15 days
Published on

ಮಡಿಕೇರಿ
ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಗೆ ಹೊಂದಿಕೊAಡAತೆ ಇರುವ ಅಪಾಯಕಾರಿ ತಡೆಗೋಡೆಗೆ ಪರ್ಯಾಯ ವ್ಯವಸ್ಥೆ ರೂಪಿಸಿ ಇನ್ನು 15 ದಿನಗಳ ಒಳಗೆ ಸಂಪೂರ್ಣ ಯೋಜನಾ ವರದಿ ಕೊಡಲು ವಿಧಾನಸಭೆ ಅರ್ಜಿ ಸಮಿತಿ ಅಧಿಕಾರಿಗಳಿಗೆ ಸೂಚಿಸಿದೆ. ಗುರುವಾರ ಶಾಸಕ ಎಸ್. ಸುರೇಶ್ ಕುಮಾರ್ ನೇತೃತ್ವದಲ್ಲಿ ಮಡಿಕೇರಿಗೆ ಆಗಮಿಸಿದ್ದ ಸಮಿತಿ ಸದಸ್ಯರು ಮಡಿಕೇರಿ-ಮಂಗಳೂರು ರಸ್ತೆಯಲ್ಲಿನ ತಡೆಗೋಡೆ ವೀಕ್ಷಿಸಿ, ಸ್ಥಳದಲ್ಲಿ ಅಧಿಕಾರಿಗಳು, ತಜ್ಞರಿಂದ ಮಾಹಿತಿ ಪಡೆದ ನಂತರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಸುದ್ದಿಗಾರರ ಜತೆ ಮಾತನಾಡಿದರು.

ಸರ್ಕಾರದ ಯೋಜನೆಗಳಿಂದ ತೊಂದರೆ ಆದರೆ ಅರ್ಜಿ ಸಮಿತಿ ಮುಂದೆ ಅಹವಾಲು ಬರುತ್ತದೆ. ಅದೇ ರೀತಿಯಲ್ಲಿ ಮಡಿಕೇರಿಯಲ್ಲಿರುವ ಕೊಡಗು ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಅಪಾಯಕಾರಿ ಸ್ಥಿತಿಯಲ್ಲಿ ಇರುವ ಬಗ್ಗೆ ಸಮಿತಿಗೆ ಅರ್ಜಿ ಬಂದಿತ್ತು. ಈ ಬಗ್ಗೆ ಈಗಾಗಲೇ ಅರ್ಜಿ ಸಮಿತಿಯ 4 ಸಭೆಗಳನ್ನು ನಡೆಸಿ ಕಾಮಗಾರಿಗೆ ಸಂಬAಧಿಸಿದAತೆ ತಾಂತ್ರಿಕ ವಿವರ ಪಡೆದುಕೊಳ್ಳಲಾಗಿದೆ. ಈ ತಡೆಗೋಡೆ ಅಪಾಯಕಾರಿ ಸ್ಥಿತಿಯಲ್ಲಿದ್ದು ಸಾರ್ವಜನಿಕರು ಆತಂಕದಿAದ ಇರುವ ಮಾಹಿತಿ ಸಿಕ್ಕಿತ್ತು. 5 ಕೋಟಿ ರೂ. ವೆಚ್ಚದ ಕಟ್ಟಡಕ್ಕೆ 7 ಕೋಟಿ ರೂ. ವೆಚ್ಚದ ತಡೆಗೋಡೆ ಹೇಗಿರುತ್ತದೆ ಎನ್ನುವುದನ್ನು ಖುದ್ದು ವೀಕ್ಷಿಸಬೇಕಿತ್ತು. ಹಾಗಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಸಾರ್ವಜನಿಕರಲ್ಲಿ ಇರುವ ಆತಂಕ ದೂರ ಮಾಡುವ ನಿಟ್ಟಿನಲ್ಲಿ ಪರಿಹಾರೋಪಾಯ ಕಂಡುಕೊಳ್ಳಲು ಸಭೆ ನಡೆಸಲಾಗಿದೆ.


ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ತಜ್ಞರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಇಂಜಿನಿಯರ್‌ಗಳು ಈ ಸಭೆಯಲ್ಲಿ ಪಾಲ್ಗೊಂಡು ತಡೆಗೋಡೆಯನ್ನು ಅಪಾಯದಿಂದ ಪಾರು ಮಾಡಲು, ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಉಳಿಸಿಕೊಳ್ಳಲು ಹಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಕಾಮಗಾರಿ 2013ರಲ್ಲಿ ಆರಂಭವಾಗಿ 2015ಕ್ಕೆ ಮುಗಿದಿದೆ. ಇದೀಗ 2024 ಬಂದಿದ್ದರೂ ಇಲ್ಲಿಯ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಹಾಗಾಗಿ ಈ ಸಭೆಯಲ್ಲಿ ಸಂಪೂರ್ಣ ಚರ್ಚೆ ನಡೆಸಲಾಗಿದೆ.

ಒಟ್ಟು ಯೋಜನೆಯನ್ನು ಮರು ಪರಿಶೀಲಿಸಬೇಕು. ತಡೆಗೋಡೆಗೆ ಬದಲು ಪರ್ಯಾಯ ಪ್ರಸ್ತಾಪ ಕೊಡಬೇಕು. ತಡೆಗೋಡೆಗಾಗಿ ನಿರ್ಮಾಣವಾಗಿತ್ತಿರುವ ರಸ್ತೆ ಕಾಮಗಾರಿ ನಿಲ್ಲಿಸಬೇಕು. ತಡೆಗೋಡೆಯನ್ನು ಹಂತ ಹಂತವಾಗಿ ನಿರ್ಮಾಣ ಮಾಡುವ ಸಾಧ್ಯತೆ ಬಗ್ಗೆ ಕೂಲಂಕುಶ ಪರಿಶೀಲನೆ ನಡೆಸಬೇಕು. ಈ ಬಗ್ಗೆ ಇನ್ನು 15 ದಿನಗಳ ಒಳಗೆ ಸಂಪೂರ್ಣ ಯೋಜನಾ ವರದಿಯನ್ನು ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ವರದಿಯನ್ನು ಅರ್ಜಿ ಸಮಿತಿ ಸಭೆಯಲ್ಲಿ ಚರ್ಚೆ ಮಾಡಿ ಮುಂದೆ ಏನು ಮಾಡಬೇಕು ಎನ್ನುವುದರ ಬಗ್ಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಮಡಿಕೇರಿ ಶಾಸಕರೂ ಆಗಿರುವ ಸಮಿತಿ ಸದಸ್ಯ ಡಾ. ಮಂತರ್ ಗೌಡ ಮಾತನಾಡಿ ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆ ಸಂಬAಧಿಸಿದAತೆ ಹಲವು ಬಾರಿ ಸರ್ಕಾರದ ಗಮನಸೆಳೆಯಲಾಗಿತ್ತು. ಆ ನಿಟ್ಟಿನಲ್ಲಿ ವಿಧಾನಸಭೆಯ ಅರ್ಜಿ ಸಮಿತಿ ಸದಸ್ಯರು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ್ದು, ಸಮಿತಿ ನಿರ್ಣಯಗಳು ಹಾಗೂ ತಾಂತ್ರಿಕ ತಜ್ಞರು ನೀಡುವ ವರದಿಯಂತೆ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಮುಂದಿನ ಮಳೆಗಾಲದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಗಮನಹರಿಸಲಾಗುವುದು. ತಡೆಗೋಡೆ ಸಂಬAಧ ಸರ್ಕಾರದ ಗಮನ ಸೆಳೆದು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಡಾ.ಮಂತರ್ ಗೌಡ ಹೇಳಿದರು.

ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿ ಸದಸ್ಯರಾದ ಎ.ಮಂಜು, ಸುರೇಶ್ ಬಾಬು ಸಿ.ವಿ., ಮಹೇಂದ್ರ ಕಲ್ಲಪ್ಪ ತಮ್ಮಣ್ಣನವರ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ. ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಸತ್ಯನಾರಾಯಣ, ಅಂದಾಜು ಸಮಿತಿಯ ಜಯಪ್ರಸಾದ್, ಸದಸ್ಯರಾದ ಭುರ್ಜಿ, ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕ ಶಿವಕುಮಾರ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸಿದ್ದೇಗೌಡ, ಎಇಇ ಗಿರೀಶ್ ಇತರರು ಇದ್ದರು.

ಬಾಕ್ಸ್ :
ಇದೇ ವೇಳೆ ತಂಬಾಕು ಸೇವನೆಯಿಂದ ಆಗುತ್ತಿರುವ ಅಪಾಯ ಕುರಿತು ಮಾತನಾಡಿದ ಎಸ್. ಸುರೇಶ್ ಕುಮಾರ್ ಡ್ರಗ್ಸ್, ಹೆರಾಯಿನ್ ಮತ್ತಿತರ ಮಾದಕ ವಸ್ತುಗಳಿಗೆ ಯಾರೂ ಸಹ ದಾಸರಾಗಬಾರದು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಡ್ರಗ್ಸ್ ಅಥವಾ ಮಾದಕ ವಸ್ತುಗಳಿಂದ ದೂರ ಇರಬೇಕು. ಡ್ರಗ್ಸ್ ವಿರುದ್ಧದ ಹೋರಾಟ ಭಯೋತ್ಪಾದನೆ ವಿರುದ್ಧದ ಹೋರಾಟ ಇದ್ದಂತೆ. ಶಿಕ್ಷಣ, ಆರೋಗ್ಯ, ಪೊಲೀಸ್, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಇಲಾಖೆಗಳು ಡ್ರಗ್ಸ್ ನಿಯಂತ್ರಣಕ್ಕೆ ಸಂಬAಧಿಸಿದAತೆ ನಿರಂತರವಾಗಿ ಜಾಗೃತಿ ವಹಿಸಬೇಕಿದೆ ಡ್ರಗ್ಸ್ ವಿರುದ್ದ ಪ್ರತಿಯೊಬ್ಬರೂ ಹೋರಾಟ ಮಾಡಬೇಕು. ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ ಎಂದರು.
ಈ ಸಂದರ್ಭ ಮಾತನಾಡಿದ ಎಸ್‌ಪಿ ಕೆ.ರಾಮರಾಜನ್, ಹೆರಾಯಿನ್ ಸೇರಿದಂತೆ ಡ್ರಗ್ಸ್ ನಿಯಂತ್ರಣಕ್ಕೆ ಸಂಬAಧಿಸಿದAತೆ ಕಾಲ ಕಾಲಕ್ಕೆ ತಪಾಸಣೆ ಮಾಡಿ, ತಪ್ಪು ಕಂಡುಬAದ ಹಲವರನ್ನು ಬಂಧಿಸಲಾಗಿದೆ. ಡ್ರಗ್ಸ್ ನಿಯಂತ್ರಣ ಮಾಡಲು ಗಡಿ ಪ್ರದೇಶಗಳು ಸೇರಿ ಎಲ್ಲೆಡೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net