ಶುದ್ಧ ಕುಡಿಯುವ ನೀರು ಪೂರೈಸಲು ಸೂಚನೆ

thaluku mattada sabhe
Published on

ಮಡಿಕೇರಿ: ಪ್ರತೀ ಗ್ರಾ.ಪಂ. ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಸೂಚಿಸಿದರು.


ನಗರದ ಉಪ ವಿಭಾಗಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಟಾಸ್ಕ್‌ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರಾಕೃತಿಕ ವಿಕೋಪ ಎದುರಿಸುವುದು ಹಾಗೂ ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ಭೂಕುಸಿತ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವುದು ಮತ್ತಿತರ ಸಂಬಂಧ ಸುದೀರ್ಘ ಚರ್ಚೆ ನಡೆಯಿತು.


ಪ್ರತೀ ಗ್ರಾ.ಪಂ. ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಸಬೇಕು. ಜತೆಗೆ ಪ್ರತಿ ನಿತ್ಯ ಕುಡಿಯುವ ನೀರನ್ನು ಪರೀಕ್ಷೆ ಮಾಡಬೇಕು ಎಂದು ವಿನಾಯಕ ನರ್ವಾಡೆ ಸೂಚಿಸಿದರು.


ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಅಗತ್ಯ ಮುನ್ನೆಚ್ಚರ ವಹಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಚಿತವಾಗಿ ಮಾಹಿತಿ ನೀಡಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಬೇಕು ಎಂದು ಉಪ ವಿಭಾಗಾಧಿಕಾರಿ ನಿರ್ದೇಶನ ನೀಡಿದರು.


ಮುಂಗಾರು ಸಂದರ್ಭದಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಕರ್ತವ್ಯ ನಿರ್ವಹಿಸಬೇಕು. ಇಲ್ಲಿನ ಸ್ಥಳೀಯ ಸಮಸ್ಯೆಗಳನ್ನು ಅರಿತು ಕಾರ್ಯ ನಿರ್ವಹಿಸಬೇಕು ಎಂದು ವಿನಾಯಕ ನರ್ವಾಡೆ ಅವರು ಹೇಳಿದರು.


ತಾಲೂಕು ನೋಡಲ್ ಅಧಿಕಾರಿ ಹಾಗೂ ತಹಶೀಲ್ದಾರ್ ರಮೇಶ್ ಬಾಬು, ನೋಡಲ್ ಅಧಿಕಾರಿಗಳಾದ ಶೇಖರ್, ಗಿರೀಶ್, ವಿನಯಕುಮಾರ್, ಭೂದಾಖಲೆಗಳ ಸಹಾಯಕ ನಿರ್ದೇಶಕ ವಿರೂಪಾಕ್ಷ, ತಾಲೂಕು ವೈದ್ಯಾಧಿಕಾರಿ ಚೇತನ್, ತಾ.ಪಂ.ಇಒ ನಾಗಮಣಿ, ಪೌರಾಯುಕ್ತರಾದ ವಿಜಯ್, ಸಿಡಿಪಿಒ ಸೀತಾಲಕ್ಷ್ಮಿ, ಕುಡಿಯುವ ನೀರು ವಿಭಾಗದ ಎಇಇ ಹರ್ಷದ್ ಪಾಷಾ, ಹೋಬಳಿ ಮಟ್ಟದ ಕಂದಾಯ ನಿರೀಕ್ಷಕರು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net