ಬುರ್ಖಾ ಧರಿಸಿ ಓಡಾಟ ಕುಖ್ಯಾತ ರೌಡಿ ಇಮ್ರಾನ್ ಸುರ್ಮೋ ಬಂಧನ

ಇಮ್ರಾನ್
ಇಮ್ರಾನ್
Published on
ಮಂಗಳೂರು: ಬುರ್ಖಾ ಧರಿಸಿ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಒಟ್ಟು 23ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಕುಖ್ಯಾತ ರೌಡಿ ಅಸಾಮಿ ಇಮ್ರಾನ್ ಸುರ್ಮೋ ಇಮ್ರಾನ್ ಎಂಬಾತನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಇಮ್ರಾನ್ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ, ದರೋಡೆ, ಹಲ್ಲೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿದ್ದವು. ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ಆತ ನ್ಯಾಯಾಲಯಕ್ಕೆ
ಹಾಜರಾಗದೇ ತಲೆಮರೆಸಿಕೊಂಡಿದ್ದ. ಪೊಲೀಸರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಬುರ್ಖಾ ಧರಿಸಿಕೊಂಡು ಓಡಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net