28 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ

mng--20 sep thallath
Published on

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು 7 ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.


ಬಜಾಲ್ ಫೈಸಲ್ ನಗರದ ತಲ್ಲತ್ (39) ಬಂಧಿತ ಆರೋಪಿ. ಹಲ್ಲೆ, ಕೊಲೆಯತ್ನ, ಅಪಹರಣ, ಹಫ್ತಾ ವಸೂಲಿ, ದರೋಡೆ, ಕೊಲೆ ಸಹಿತ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ.


ಈತನು 2004 ನೇ ಇಸವಿಯಲ್ಲಿ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದವನು ನಂತರ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ, ಮುಂಬೈ ಮುಂತಾದ ಕಡೆಗಳಲ್ಲಿ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆ ಯತ್ನ, ಕೊಲೆ, ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ, ಅಪಹರಣ ಹೀಗೆ ಒಟ್ಟು 28 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.


ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಸಿಬಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net