ಭಗವಂತನ ಚಿಂತನೆ ನಡೆಯುವುದು ವಿರಳ

siddharodha math
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಬೇರೆ ಬೇರೆ ವಿಷಯಗಳ ಚಿಂತನೆ ಮಾಡುವ ಶಿಬಿರಗಳು ಸಾಕಷ್ಟು ನಡೆಯುತ್ತವೆ. ಆದರೆ, ಸರ್ವ ಜೀವಿಗಳ ಆತ್ಮ ಸ್ವರೂಪಿಯಾದ ಭಗವಂತನ ಚಿಂತನೆ ನಡೆಯುವುದು ಅತೀ ವಿರಳ ಎಂದು ಮಹಾಲಿಂಗಪೂರ ಚಿಕ್ಕನಂದಿಯ ಶ್ರೀ ಸಿದ್ಧಾರೂಢ ದರ್ಶನ ಪೀಠದ ಶ್ರೀ ಸಹಜಾನಂದ ಸ್ವಾಮೀಜಿ ಹೇಳಿದರು.

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ಮಠದಲ್ಲಿ ಶುಕ್ರವಾರ ಆಯೋಜಿಸಿದ್ದ ಭಗವಚ್ಚಿಂತನ ಸಾಧನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಶ್ರೀಗಳು, ಮಠದಲ್ಲಿ ಸತತ 16 ವರ್ಷಗಳಿಂದ ಭಗವಚ್ಚಿಂತನ ಸಾಧನ ಶಿಬಿರ ನಡೆಯಿಸಿಕೊಂಡು ಬಂದಿರುವುದು ಅತ್ಯಂತ ಶ್ಲಾಘನೀಯ. ಈ ಶಿಬಿರದ ಮೂಲಕ ವಿಚಾರ ಸಾಗರ, ಪಾರಮಾರ್ಥಗೀತೆ, ಸಿದ್ಧಾರೂಢರ ಚರಿತ್ರೆ ಹಾಗೂ ಶ್ರೀಮನ್ ನಿಜಗುಣ ಸ್ವಾಮಿಗಳ ಶಾಸ್ತ್ರ ಮುಂತಾದ ಗ್ರಂಥಗಳನ್ನು ಅಧ್ಯಯನ ಮಾಡಲು ಶಿಬಿರಾರ್ಥಿಗಳಿಗೆ ಅನುಕೂಲವಾಯಿತು ಎಂದರು.

ರನ್ನತಿಮ್ಮಾಪುರ ಶಿವಾನಂದ ಆಶ್ರಮದ ಶ್ರೀ ಬಸವರಾಜ ಸ್ವಾಮೀಜಿ, ರನ್ನಬೆಳಗಲಿಯ ಶ್ರೀ ಸದಾಶಿವ ಗುರೂಜಿ ಹಾಗೂ ಮಾತೋಶ್ರೀ ಶಶಿಕಲಾ ಮಾತಾ ಸಾನ್ನಿಧ್ಯ ವಹಿಸಿದ್ದರು. ಶ್ರೀ ಸಿದ್ಧಾರೂಢ ಸ್ವಾಮಿ ಮಠದ ಟ್ರಸ್ಟ್ ಕಮಿಟಿ ಚೇರ್ಮನ್ ಬಸವರಾಜ ಕಲ್ಯಾಣಶೆಟ್ಟರ್ ಅಧ್ಯಕ್ಷತೆ ವಹಿಸಿದ್ದರು. ಧರ್ಮದರ್ಶಿ ಉದಯಕುಮಾರ ನಾಯ್ಕ ಸ್ವಾಗತಿಸಿದರು. ಮಾಜಿ ಧರ್ಮದರ್ಶಿ ಎಸ್.ಐ. ಕೋಳಕೂರ ನಿರೂಪಿಸಿದರು. ಧರ್ಮದರ್ಶಿ ಗೀತಾ ಕಲಬುರ್ಗಿ ವಂದಿಸಿದರು. ಗೌರವ ಕಾರ್ಯದರ್ಶಿ ಸರ್ವಮಂಗಳಾ ಪಾಠಕ, ಧರ್ಮದರ್ಶಿಗಳಾದ ಡಾ. ಗೋವಿಂದ ಮಣ್ಣೂರ, ರಮೇಶ ಬೆಳಗಾವಿ, ಮ್ಯಾನೇಜರ್ ಈರಣ್ಣ ತುಪ್ಪದ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net