ವಿಜಯವಾಣಿ ಸುದ್ದಿಜಾಲ ಚಿಂತಾಮಣಿ
ತಾಲೂಕಿನ ಕುರುಬೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಾಷ್ಟ್ರೀಯ ಗುಣಮಟ್ಟ ಮಾನದಂಡಗಳ (ಎನ್‌ಕ್ಯೂಎಎಸ್) ತಂಡ ಬುಧವಾರ ಭೇಟಿ ನೀಡಿ ಸ್ವಚ್ಛತೆ ಹಾಗೂ ಆಸ್ಪತ್ರೆ ನಿರ್ವಹಣೆ, ಗುಣಮಟ್ಟದ ಪರಿಶೀಲನೆ ನಡೆಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಪೂರ್ಣಿಮಾ ನಾರಾಯಣ್ ಮಾತನಾಡಿ, ಅಧಿಕಾರಿಗಳು ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರೋಗಿಗಳ ದಾಖಲಾತಿ ಹಾಗೂ ರೋಗಿಗಳ ಗುಣಮಟ್ಟದ ಸೇವೆ, ಸ್ವಚ್ಛತೆ ದಾಖಲೆಗಳ ನಿರ್ವಹಣೆಯನ್ನು ಪರಿಶೀಲಿಸಿ ವರದಿ ಸಲ್ಲಿಸಲಾಗುತ್ತದೆ. ಆಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ರಾಷ್ಟ್ರೀಯ ಗುಣಮಟ್ಟದ ಅಧಿಕಾರಿ ಡಾ.ಅಶೋಕ್ ಕುಮಾರ್ ಪಲಿವಾಲ್ ಮಹಾರಾಷ್ಟ್ರ, ವಡ್ಡಿಪಲ್ಲಿ ಸುಬ್ರಹ್ಮಣ್ಯಂ ಆಂಧ್ರಪ್ರದೇಶ್, ಡಿಕ್ಯೂಎಎಂ ಚಿಕ್ಕಬಳ್ಳಾಪುರ ಅಧಿಕಾರಿ ಹೈದರ್ ಆರಿಫ್, ಗ್ರಾಮ ಪಂಚಾಯಿತಿ ಅಧ್ಯಕ್ಷ ನಂಜೇಗೌಡ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ವಿ.ನರೇಂದ್ರ ಗೌಡ, ರಾಮಚಂದ್ರಪ್ಪ ಇದ್ದರು.