ಕೂಲಿ ಕೆಲಸಕ್ಕಾಗಿ ಗ್ರಾಪಂಗೆ ಮುತ್ತಿಗೆ

jagaluru chikkabannihatti villagers protest
Published on

ಜಗಳೂರು: ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷವಿಡಿ ಕೂಲಿ ಕೆಲಸ ನೀಡುವಂತೆ ಒತ್ತಾಯಿಸಿ ಚಿಕ್ಕಬನ್ನಿಹಟ್ಟಿ ಗ್ರಾಮಸ್ಥರು ಮಂಗಳವಾರ ತಾಲೂಕಿನ ಹೊಸಕೆರೆ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಬೆಳಗ್ಗೆ ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿದ ಗ್ರಾಮಸ್ಥರು, ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಗ್ರಾಮದಲ್ಲಿ ಕೃಷಿ ಕೆಲಸ ಮುಗಿದಿದ್ದು, ಕೂಲಿ ಇಲ್ಲದೇ ಜೀವನ ನಡೆಸುವುದು ತುಂಬಾ ಕಷ್ಟವಾಗಿದೆ.

ಕೂಲಿ ಕೆಲಸ ನೀಡಬೇಕು. ಚಿಕ್ಕಬನ್ನಿಹಟ್ಟಿ ಗ್ರಾಮದ ದಲಿತ ಕಾಲನಿಯ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಇಲ್ಲದಿದ್ದರೆ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ನಿಂಗಪ್ಪ, ಚಂದ್ರಪ್ಪ, ಮಂಜಣ್ಣ, ಲಲಿತಮ್ಮ, ಹವಳಮ್ಮ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net