ಸ್ವಗ್ರಾಮದಲ್ಲೇ ದುಡಿಯಲು ನರೇಗಾ ಸಹಕಾರಿ

ಹನುಮಸಾಗರ ಸಮೀಪದ ತುಮರಿಕೊಪ್ಪ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಾಲಾ ಹೂಳೆತ್ತುವ ಕಾಮಗಾರಿಗೆ ಗ್ರಾಪಂ ಅಧ್ಯಕ್ಷೆ ರೇಖಾ ಲಂಡೂರಿ ಭೂಮಿ ಪೂಜೆ ನೆರವೇರಿಸಿದರು. ಉಪಾಧ್ಯಕ್ಷೆ ಆನಂದವ್ವ ಮಾದರ, ಪಿಡಿಒ ಮುತ್ತಣ್ಣ ಶಾಂತಗೇರಿ ಇತರರಿದ್ದರು.
ಹನುಮಸಾಗರ ಸಮೀಪದ ತುಮರಿಕೊಪ್ಪ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಾಲಾ ಹೂಳೆತ್ತುವ ಕಾಮಗಾರಿಗೆ ಗ್ರಾಪಂ ಅಧ್ಯಕ್ಷೆ ರೇಖಾ ಲಂಡೂರಿ ಭೂಮಿ ಪೂಜೆ ನೆರವೇರಿಸಿದರು. ಉಪಾಧ್ಯಕ್ಷೆ ಆನಂದವ್ವ ಮಾದರ, ಪಿಡಿಒ ಮುತ್ತಣ್ಣ ಶಾಂತಗೇರಿ ಇತರರಿದ್ದರು.
Published on

ಹನುಮಸಾಗರ: ಉದ್ಯೋಗ ಹುಡುಕಿ ವಲಸೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜನೆ ಜಾರಿಗೊಳಿಸಲಾಗಿದ್ದು, ಗ್ರಾಮೀಣ ಜನರು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಗ್ರಾಪಂ ಅಧ್ಯಕ್ಷೆ ರೇಖಾ ಲಂಡೂರಿ ಹೇಳಿದರು.

ಸಮೀಪದ ತುಮರಿಕೊಪ್ಪ ಗ್ರಾಮದಲ್ಲಿ ಮಂಗಳವಾರ ನರೇಗಾ ಯೋಜನೆಯಡಿ ನಾಲಾ ಹೂಳೆತ್ತುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. 20 ವರ್ಷಗಳ ಹಿಂದೆ ಗ್ರಾಮೀಣ ಜನರು ಉದ್ಯೋಗ ಅರಸಿ ಮಂಗಳೂರು, ಉಡುಪಿ, ಗೋವಾ, ಬೆಂಗಳೂರಿನಂಥ ಮಹಾನಗರಗಳಿಗೆ ಗುಳೆ ಹೋಗುತ್ತಿದ್ದರು. ಬೇಸಿಗೆ ಆರಂಭವಾರದೆ ಹಳ್ಳಿಗಳಲ್ಲಿ ಜನರೆ ಇರುತ್ತಿರಲಿಲ್ಲ. ಸ್ವಗ್ರಾಮದಲ್ಲೇ ದುಡಿಯಲು ನರೇಗಾ ಯೋಜನೆ ಸಹಕಾರಿಯಾಗಿದ್ದು, ಗ್ರಾಪಂನಲ್ಲಿ ಸೂಕ್ತ ದಾಖಲೆಗಳನ್ನು ನೀಡಿ ಉದ್ಯೋಗ ಚೀಟಿ ಪಡೆದು ಕೆಲಸ ಮಾಡಿ ಕೂಲಿ ಪಡೆಯಿರಿ. ಪುರುಷ ಹಾಗೂ ಮಹಿಳಾ ಕಾರ್ಮಿಕರಿಗೆ ಸಮಾನ ವೇತನ ನೀಡಲಾಗುವುದು ಎಂದರು.

ಪಿಡಿಒ ಮುತ್ತಣ್ಣ ಶಾಂತಗೇರಿ, ಗ್ರಾಪಂ ಉಪಾಧ್ಯಕ್ಷೆ ಆನಂದವ್ವ ಮಾದರ, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net