ಹೂವಿನಹಡಗಲಿ: ಮಹಾತ್ಮಾಗಾಂಧಿ ನರೇಗಾ ಯೋಜನೆ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆಗಾಗಿ ಜಿಲ್ಲೆಗೆ ನಾಲ್ಕು ಪ್ರಶಸ್ತಿಗಳು ಲಭಿಸಿವೆ.
ಅತ್ಯುತ್ತಮ ಒಗ್ಗೂಡಿಸುವೆ, ಕೃಷಿ ಮತ್ತು ಜಲಾನಯನ ಇಲಾಖೆ, ಅರಣ್ಯ ಇಲಾಖೆ ಹಾಗೂ ಹೂವಿನಹಡಗಲಿಯ ತಾಪಂ ಮತ್ತು ಹ್ಯಾರಡ ಗ್ರಾಪಂಗಳು ಪ್ರಶಸ್ತಿಗೆ ಆಯ್ಕೆಯಾಗಿದೆ.
ಕಲಬುರಗಿ ವಿಭಾಗದಿಂದ ಮಹಾತ್ಮಾಗಾಂಧಿ ನರೇಗಾ ಯೋಜನೆ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಪಂ ಹಾಗೂ ಹ್ಯಾರಡ ಗ್ರಾಪಂ ಪಶಸ್ತಿ ಲಭಿಸಿದೆ. ಫೆ.5ರಂದು ಬೆಂಗಳೂರಿನಲ್ಲಿ ನಡೆಯಲಿರುವ ನರೇಗಾ ಹಬ್ಬದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.