

ಲಕ್ಷ್ಮೇಶ್ವರ: ಬಾಕಿ ಇರುವ 6-7 ತಿಂಗಳ ವೇತನ ಪಾವತಿಸುವಂತೆ ಆಗ್ರಹಿಸಿ ತಾಲೂಕು ನರೇಗಾ ಸಿಬ್ಬಂದಿ ತಾ.ಪಂ. ಇ.ಒ. ಕೃಷ್ಣಪ್ಪ ಧರ್ಮರ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ಫಕೀರೇಶ ಮತ್ತು ಮಂಜುನಾಥ ತಳವಾರ ಮಾತನಾಡಿ, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಮಟ್ಟದಲ್ಲಿ ವಿವಿಧ ಸ್ಥರಗಳಲ್ಲಿ ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಲ್ಲಿ ಹೊರ ಸಂಪನ್ಮೂಲದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಗಳಿಗೆ ಕಳೆದ ಜನವರಿ-2025ರ ಮಾಹೆಯಿಂದ ಇಲ್ಲಿಯವರೆಗೆ ವೇತನ ಪಾವತಿಯಾಗಿಲ್ಲ. ಇದರಿಂದ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ. ಇನ್ನು ಎರಡು ದಿನಗಳಲ್ಲಿ ವೇತನ ವಾವತಿಯಾಗದಿದ್ದರೆ ಜುಲೈ 7ರಂದು ಅಸಹಕಾರ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದರು.
ಎಸ್.ಕೆ. ಕರನಗೌಡ್ರು, ಎಂ.ಎಚ್. ಪಾಟೀಲ, ಎಸ್.ಎಸ್. ಪಾಟೀಲ, ಎಸ್.ವಿ. ಕುಲಕರ್ಣಿ, ಹರೀಶ, ಭಾರತಿ, ಶಿಲ್ಪಾ ಲಮಾಣಿ, ಗಂಗಮ್ಮ ಹರೀಜನ, ಶಿವಕ್ಕ ಮಾದರ, ಪರಮೇಶ ಲಮಾಣಿ, ವಿನೋದಕುಮಾರ ಲಮಾಣಿ, ಗೌರಮ್ಮ ಲಮಾಣಿ, ಭೀಮಪ್ಪ ರಾಠೋಡ ಮಂಜುಳಾ ಕಟ್ಟಿಮನಿ ಇದ್ದರು.