ಶಾಸಕರಿಗೆ ನರೇಗಾ ಸಿಬ್ಬಂದಿ ಮನವಿ

lxr 1
Published on

ಲಕ್ಷ್ಮೇಶ್ವರ: ಆರು ತಿಂಗಳ ಬಾಕಿ ವೇತನ ಬಿಡುಗಡೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನರೇಗಾ ನೌಕರರು ನಡೆಸುತ್ತಿರುವ ಅಸಹಕಾರ ಚಳವಳಿ 10ನೇ ದಿನಕ್ಕೆ ಕಾಲಿಟ್ಟಿದೆ. ನರೇಗಾ ನೌಕರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವಂತೆ ಆಗ್ರಹಿಸಿ ಮಂಗಳವಾರ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಮನವಿ ಸಲ್ಲಿಸಿದರು.

ನರೇಗಾ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೌಕರರು ಜುಲೈ 7ರಿಂದ ಅಸಹಕಾರ ಚಳವಳಿ ಆರಂಭಿಸಿದ್ದು, ವೇತನ ವಿಳಂಬ, ಆರೋಗ್ಯ ವಿಮೆ ಹಾಗೂ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸುತ್ತಿದ್ದಾರೆ. ಅಸಹಕಾರ ಚಳವಳಿ ಹಮ್ಮಿಕೊಂಡಿದ್ದ ನರೇಗಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದ ಶಾಸಕರಿಗೆ ಮನವಿ ಸಲ್ಲಿಸಿದರು.

ಕಳೆದ ಆರು ತಿಂಗಳಿನಿಂದ ವೇತನವಿಲ್ಲದೆ ಜೀವನ ನಡೆಸುವುದು ಕಷ್ಟವಾಗಿದೆ. ಮಕ್ಕಳ ಶಾಲಾ ಶುಲ್ಕ, ವೈದ್ಯಕೀಯ ಸೇವೆಗಳಿಗೆ ಇನ್ನೊಬ್ಬರ ಅಂಗಲಾಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸಮಸ್ಯೆ ಬಗೆಹರಿಸುವಂತೆ ನೌಕರರು ಶಾಸಕರ ಮುಂದೆ ಅಳಲು ತೋಡಿಕೊಂಡರು. ತಾಂತ್ರಿಕ ಸಂಯೋಜಕರು, ಎಂಐಎಸ್ ಸಂಯೋಜಕರು, ಟಿಐಇಸಿ ಸಂಯೋಜಕರು, ತಾಂತ್ರಿಕ ಸಹಾಯಕರು, ಬಿಎಫ್‌ಟಿ, ಗ್ರಾಮ ಕಾಯಕ ಮಿತ್ರರು, ತಾಂಡಾ ರೋಜಗಾರ್ ಮಿತ್ರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net