

ಬಂಟ್ವಾಳ: ಗ್ರಾಮೀಣ ಪ್ರದೇಶದಲ್ಲಿ ಅರ್ಹ ಫಲಾನುಭವಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳನ್ನು ತಲುಪಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತಿರುವ ಗ್ರಾಪಂಗಳು ನಾಗರಿಕರಿಗೆ ಸುಲಭವಾಗಿ ಕೈಗೆ ಸಿಗುವ ಸರ್ಕಾರ ಎಂದು ಶಾಸಕ ರಾಜೇಶ್ ನೈಾಕ್ ಹೇಳಿದರು.
ಅಮ್ಟಾಡಿ ಗ್ರಾಪಂನಲ್ಲಿ ಉದ್ಯೋಗ ಖಾತ್ರಿ ಯೋಜನೆ ಮತ್ತು ಪಂಚಾಯಿತಿ ನಿಧಿಯಡಿ 13 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್ಆರ್ಎಲ್ಎಂ) ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಗ್ರಾಪಂ ಅಧ್ಯಕ್ಷ ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬುಡಾ ಅಧ್ಯಕ್ಷ ಬೇಬಿ ಕುಂದರ್, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಮಲ್ಲಿಕಾ ವಿ.ಶೆಟ್ಟಿ, ತಾಲೂಕು ಎನ್ಆರ್ಎಲ್ಎಂ ವ್ಯವಸ್ಥಾಪಕ ಪ್ರದೀಪ್ ಕಾಮತ್, ಪಿಡಿಒ ಗೋಕುಲ್ ದಾಸ್ ಭಕ್ತ, ಗ್ರಾಪಂ ಉಪಾಧ್ಯಕ್ಷೆ ಮೋಹಿನಿ, ಮಾಜಿ ಅಧ್ಯಕ್ಷ ಹರೀಶ ಶೆಟ್ಟಿ ಪಡು, ಗುತ್ತಿಗೆದಾರ ಕ್ಸೇವಿಯರ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು. 27 ಮಂದಿ ಅರ್ಹ ಫಲಾನುಭವಿಗಳಿಗೆ ಚೆಕ್ ಹಸ್ತಾಂತರಿಸಲಾಯಿತು. ಒಕ್ಕೂಟ ಮುಖ್ಯ ಬರಹಗಾರ ವನಿತಾ ಗಣೇಶ್ ಸ್ವಾಗತಿಸಿದರು. ಗ್ರಾಪಂ ಕಾರ್ಯದರ್ಶಿ ಕೆ.ನಿತ್ಯಾನಂದ ವಂದಿಸಿದರು. ಪತ್ರಕರ್ತ ಮೋಹನ್ ಕೆ. ಶ್ರೀಯಾನ್ ರಾಯಿ ಕಾರ್ಯಕ್ರಮ ನಿರೂಪಿಸಿದರು.