ಬೆಂಗಳೂರು: ಪಿಯುಸಿಯಲ್ಲಿ ವಿಜ್ಞಾನ ವಿಭಾಗಕ್ಕೆ ಬೇಡಿಕೆ ಹೆಚ್ಚಾಗಿದ್ದು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮೈಸೂರಿನ ರಾಮಕೃಷ್ಣನಗರದಲ್ಲಿರುವ ನೃಪತುಂಗ ಕನ್ನಡ ಪದವಿಪೂರ್ವ ಕಾಲೇಜು ಕನ್ನಡ ಮಾಧ್ಯಮದಲ್ಲಿ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಷಯವನ್ನು ಬೋದಿಸುತ್ತಿರುವ ಹೆಗ್ಗಳಿಕೆ ಹೊಂದಿದೆ.
ಪ್ರಸಕ್ತ ಸಾಲಿನಿಂದ ಪಿಸಿಎಂಬಿ (ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಹಾಗೂ ಗಣಿತ) ಮತ್ತು ಪಿಸಿಎಂಸಿಎಸ್ (ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಹಾಗೂ ಕಂಪ್ಯೂಟರ್ ವಿಜ್ಞಾನ) ಐಚ್ಛಿಕ ವಿಷಯಗಳನ್ನು ಆರಂಭಿಸಿದೆ.
ಕನ್ನಡ ಮಾಧ್ಯಮದಲ್ಲಿ ವಿಜ್ಞಾನ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ಇದೆ. ಮೈಸೂರಿನ ಕುದೇರು ಮಠದ ಶಾಖಾ ಮಠದಲ್ಲಿ ಉಚಿತ ವಸತಿ ಒದಗಿಸಲಾಗುತ್ತದೆ. ಜೊತೆಗೆ ಸರ್ಕಾರಿ ಹಾಸ್ಟೆಲ್ ಸೌಲಭ್ಯವೂ ಇದೆ.
ಆಸಕ್ತ ವಿದ್ಯಾರ್ಥಿಗಳು ಜೂ.10 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ : 99860 47382 ಸಂಖ್ಯೆಯನ್ನು ಸಂಪರ್ಕಿಸಿ.