17 ವರ್ಷದ ಬಾಲಕಿಯರ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಗೆ ಎನ್.ಎಸ್.ಭೋಸರಾಜು ಚಾಲನೆ

NS Bhosaraju drive for 17-year-old girls national level hockey tournament
Published on

ಮಡಿಕೇರಿ:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ಹಾಕಿ ಪಂದ್ಯಾವಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಕೂಡಿಗೆಯ ಕ್ರೀಡಾ ಶಾಲೆ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಜನವರಿ 08 ರವರೆಗೆ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯು ಕೊಡಗು ಜಿಲ್ಲೆಯ ಕೂಡಿಗೆ, ಸೋಮವಾರಪೇಟೆ, ಮಡಿಕೇರಿ ಮತ್ತು ಪೊನ್ನಂಪೇಟೆಯ ಹಾಕಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ||ಮಂತರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಕೂಡುಮಂಗಳೂರು ಗ್ರಾ.ಪಂ. ಅಧ್ಯಕ್ಷರಾದ ಭಾಸ್ಕರ ನಾಯ್ಕ ಕೂಡಿಗೆ ಗ್ರಾ.ಪಂ. ಅಧ್ಯಕ್ಷರಾದ ಗಿರೀಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಾಡೆ, ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ಆಯುಕ್ತರ ಕಚೇರಿಯ ನಿರ್ದೇಶಕರಾದ ಬಿ.ಎಸ್.ರಘುವೀರ್, ಜಂಟಿ ನಿರ್ದೇಶಕರಾದ(ದೈಹಿಕ ಶಿಕ್ಷಣ) ಎಸ್.ಎನ್.ರಮೇಶ್, ಮೈಸೂರು ವಿಭಾಗದ ಶಾಲಾ ಶಿಕ್ಷಣ ಇಲಾಖೆ ವಿಭಾಗೀಯ ಕಾರ್ಯದರ್ಶಿ ಹಾಗೂ ಸಹ ನಿರ್ದೇಶಕರಾದ ಪಾಂಡುರಂಗ, ಮೈಸೂರು ಸಿಟಿಇ ಪ್ರಾಂಶುಪಾಲರು ಹಾಗೂ ಸಹ ನಿರ್ದೇಶಕರಾದ ಗೀತಾಂಭ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಂ.ಚಂದ್ರಕಾಂತ್, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಪಲ್ಲೇದ್, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net