ಕೊಡಗು ವಿವಿ ಕ್ಯಾಂಪಸ್‌ನಲ್ಲಿ ಎನ್‌ಎಸ್‌ಎಸ್ ಶಿಬಿರ

nss
Published on

ಕುಶಾಲನಗರ:

ಒಂದು ಪರಿವರ್ತನಾ ಶಕ್ತಿಯಾಗಿರುವ ಶಿಕ್ಷಣದ ಮೂಲಕ ಸಾಮಾಜಿಕ ಪ್ರಗತಿಗಾಗಿ ಶ್ರಮಿಸುವ ಮನೋಭಾವನೆಯನ್ನು ಯುವ ಸಮುದಾಯ ಮೈಗೂಡಿಸಿಕೊಳ್ಳಬೇಕು ಎಂದು ಕೊಡಗು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಹೇಳಿದರು.

ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಕ್ಯಾಂಪಸ್‌ನಲ್ಲಿ ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜು, ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ಹಮ್ಮಿಕೊಂಡಿರುವ ವಿಶೇಷ ವಾರ್ಷಿಕ ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಮಂಗಳವಾರ ಮಾತನಾಡಿದರು.

ವಿದ್ಯಾರ್ಥಿ ದೆಸೆಯಲ್ಲಿ ಸೇವಾಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು, ದೇಶದ ಅತ್ಯುತ್ತಮ ನಾಗರಿಕನಾಗಬೇಕು, ವಿಫಲತೆಯನ್ನು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು, ಉನ್ನತ ಶ್ರೇಷ್ಠ ಚಿಂತನೆಯನ್ನು ಬೆಳೆಸಿಕೊಳ್ಳಬೇಕು, ಜೀವನದ ಪ್ರತಿ ಹಂತದಲ್ಲೂ ಹೊಸತನ್ನು ಕಂಡುಕೊಳ್ಳುವ ಚಿಂತನೆಯನ್ನು ಬೆಳೆಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದರು.

ಕೊಡ್ಲಿಪೇಟೆ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಕೆ.ಎಸ್. ಪರಮೇಶ್ ಉದ್ಘಾಟನೆ ನೆರವೇರಿಸಿ ಮಾತನಾಡಿ ಎನ್‌ಎಸ್‌ಎಸ್ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಚಾಮರಾಜನಗರ ವಿಶ್ವವಿದ್ಯಾಲ ಕುಲಪತಿ ಪ್ರೊ. ಎಂ ಆರ್. ಗಂಗಾಧರ್ ಮಾತನಾಡಿ ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದರು. ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಮ್.ಆರ್. ನಿರಂಜನ್ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆ ಎನ್ನುವುದು ವಿದ್ಯಾರ್ಥಿಗಳಿಗೆ ಒಂದು ಮಾರ್ಗದರ್ಶನ ನೀಡುವ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಹಾಗೂ ನಾಯಕತ್ವ ಗುಣವನ್ನು ಬಳಸಿಕೊಳ್ಳುವ ಒಂದು ವೇದಿಕೆ ಎಂದು ಹೇಳಿದರು.

ಕೊಡಗು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಡಾ. ಎಂ. ಸುರೇಶ್ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆ ಎನ್ನುವುದು ಜೀವನದ ಮೌಲ್ಯಗಳನ್ನು ಕ;ಇಸುವ ಒಂದು ವೇದಿಕೆ ಎಂದರು.

ಕೊಡ್ಲಿಪೇಟೆ ವಿದ್ಯಾ ಸಂಸ್ಥೆಯ ನಿರ್ದೇಶಕ ಬಿ.ಕೆ. ಯತೀಶ್, ಯು.ವಿ. ಶಿವಪ್ರಸಾದ್ ಹಾಗೂ ಕೊಡಗು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ಗುಣಶ್ರೀ, ಉಪನ್ಯಾಸಕ ವೃಂದ, ಶಿಬಿರಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net