ಎನ್‌ಎಸ್‌ಎಸ್ ವಾರ್ಷಿಕೋತ್ಸವ ಕಾರ್ಯಕ್ರಮ ನಾಳೆ

Published on

ಕೊಳ್ಳೇಗಾಲ: ಪಟ್ಟಣದ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಜೂ.1 ರಂದು ಬೆಳಗ್ಗೆ 10.30ಕ್ಕೆ 2023-24ನೇ ಸಾಲಿನ ಸಾಂಸ್ಕೃತಿಕ ವೇದಿಕೆ, ಕ್ರೀಡೆ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಎಸ್‌ಎಸ್ ಹಾಗೂ ವಿವಿಧ ಘಟಕಗಳ ವಾರ್ಷಿಕೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಮೈಸೂರಿನ ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕಿ ಡಾ.ಎ.ಎಚ್.ಎಂ.ವಿಜಯಲಕ್ಷ್ಮೀ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಜಿ.ಜಯಲಕ್ಷೀ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಸೂರಿನ ಕಾಲೇಜು ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ಎ.ಬಿ. ನಾಗೇಂದ್ರಪ್ರಸಾದ್ ಹಾಗೂ ಐ.ಕ್ಯೂ.ಎ.ಸಿ. ಸಂಚಾಲಕ ಡಾ.ಜಿ.ಹೇಮಕುಮಾರ್ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net