ಎನ್ ಎಸ್ ಎಸ್ ಸ್ವಯಂಸೇವಕರಿಂದ ಧಾರ್ಮಿಕ ಕೇಂದ್ರಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

IMG_20240118_154704
Published on

ಧಾರ್ಮಿಕ ಕೇಂದ್ರಗಳನ್ನು ಸ್ವಚ್ಛಮಾಡುವ ಮೂಲಕ ಸಾರ್ವಜನಿಕವಾಗಿ ಜನ ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ನಾಗರಿಕರ ಕರ್ತವ್ಯ ಎಂದು ಅಂತೂರು ಬೆಂತೂರು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀ ಪ್ರಕಾಶ್ ಗೌಡ್ ಎಚ್ ಪಾಟೀಲ್ ಅವರು ನಗರದ ಆದರ್ಶ ಶಿಕ್ಷಣ ಸಂಸ್ಥೆಯ ಶ್ರೀ ವಿ ಆರ್ ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಂತೂರು ಬೆಂತೂರಿನಲ್ಲಿ ನಡೆಯುತ್ತಿರುವ ವಿಶೇಷ ವಾರ್ಷಿಕ ಶಿಬಿರದಲ್ಲಿ  ದೇವಸ್ಥಾನಗಳ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ  ಮಾತನಾಡಿದರು.

ಸಾಮಾನ್ಯ ಜನರು ದೇವಸ್ಥಾನ, ಬಸದಿ, ಮಸೀದಿ, ಚರ್ಚ್‌ಗಳ ಬಗ್ಗೆ ಪವಿತ್ರ ಭಾವನೆ ಹೊಂದಿರುತ್ತಾರೆ. ಆ ಜಾಗಗಳು ಮಲಿನವಾಗಲು ಬಿಡುವುದಿಲ್ಲ. ಗ್ರಾಮ ಸ್ವಚ್ಛವಾಗಿರಲು ಜನರಲ್ಲಿ ಸ್ವಚ್ಛತೆಯ ಪರಿಕಲ್ಪನೆ ಬರಬೇಕು. ಗ್ರಾಮಗಳ ಉದ್ದಾರ ನಮ್ಮ ಉದ್ದೇಶ ಗ್ರಾಮಗಳು ಬೆಳೆಗೆ ಬೆಳೆಯುವುದು ದೇಶ ಹಾಗೆ ಗ್ರಾಮವನ್ನ ಸೂಚಿಗೊಳಿಸುವದ ರೊಂದಿಗೆ ಧಾರ್ಮಿಕ ಕ್ಷೇತ್ರಗಳನ್ನು ನಾವು ಸೂಚಿಗೊಳಿಸುವ ಮೂಲಕ ನಮ್ಮ ಮಾನಸಿಕ ಆರೋಗ್ಯ ಮತ್ತು ದೈಹಿಕ ಆರೋಗ್ಯಕ್ಕೆ ಸ್ವಚ್ಛತೆ ಅತ್ಯಂತ ಮುಖ್ಯವಾಗಿದೆ ಸ್ವಚ್ಛತೆಯೇ ಒಂದು ರೀತಿಯಲ್ಲಿ ನಮ್ಮ ಜೀವನಕ್ಕೆ ಆಧಾರ. ನಮ್ಮ ಜೀವನದಲ್ಲಿ ಸ್ವಚ್ಛತೆಗೆ ಮಹತ್ವದ ಪಾತ್ರವಿದೆ. ನಾವು ನಿಯಮಿತವಾಗಿ ನಮ್ಮ ನೈರ್ಮಲ್ಯವನ್ನು ನೋಡಿಕೊಳ್ಳಬೇಕು ಎಂದು ತಮ್ಮ ಉದ್ಘಾಟನಾ ನುಡಿಗಳಲ್ಲಿ ಹಂಚಿಕೊಂಡರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗ್ರಾಮದ ಹಿರಿಯ ವೈದ್ಯಾಧಿಕಾರಿಗಳಾದ ಡಾ. ಆರ್ ಎಸ್ ಆಲೂರವರು ಮಾತನಾಡಿ ನಾವೆಲ್ಲರೂ ಸ್ವಚ್ಛತೆಯನ್ನು ರೂಢಿಸಿಕೊಳ್ಳಬೇಕು. ಶುಚಿತ್ವ ಎಂದರೆ ನಿಮ್ಮ ದೇಹ, ಮನಸ್ಸು ಮತ್ತು ನಿಮ್ಮ ಸುತ್ತಲಿರುವ ಎಲ್ಲವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು. ಸ್ವಚ್ಛತೆಯನ್ನು ಭಾರತೀಯ ಸಂಸ್ಕೃತಿಯ ಪ್ರತೀಕವೆಂದು ಪರಿಗಣಿಸಲಾಗಿದೆ ದೇಹ, ಮನಸ್ಸು, ಆತ್ಮ, ಬುದ್ಧಿ ಮತ್ತು ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಮಾನವ ಜೀವನದ ಪ್ರಮುಖ ಕಾರ್ಯವಾಗಿದೆ. ನಾವು ಬದುಕಲು ಆಹಾರ, ನೀರು ಮತ್ತು ಗಾಳಿಯಂತೆಯೇ. ಅದೇ ರೀತಿ ಸ್ವಚ್ಛತೆ ಕೂಡ ನಮಗೆ ಬಹಳ ಮುಖ್ಯ. ಸ್ವಚ್ಛತೆ ಬಹಳ ದೊಡ್ಡ ಮತ್ತು ಒಳ್ಳೆಯ ವಿಚಾರವಾಗಿದೆ ಎಂದು ತಮ್ಮ ಮಾತುಗಳಲ್ಲಿ ಹಂಚಿಕೊಂಡರು.

ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮ ಅಧಿಕಾರಿಗಳಾದ ಪ್ರೊ. ಬಾಹುಬಲಿ  ಪಿ ಜೈನರ, ಪ್ರೊ. ಶರೀಫ್ ಬೆನಕಲ್ , ಶ್ರೀ ಪ್ರಾಣೇಶ್ ಬೆಳ್ಳಟ್ಟಿ ಶ್ರೀ ಶಿವಕುಮಾರ ಕಣವಿ, ಶ್ರೀಕಾಂತ್ ಇಳಿಸಿರಂದು  ವಿದ್ಯಾರ್ಥಿ ಮುಖಂಡನಾದ ಕುಮಾರ್ ಮನೋಜ್ ದಲ ಬಂಜನ್ ಹಾಗೂ ಗ್ರಾಮದ ಗುರಿ ಹಿರಿಯರು ಸ್ವಯಂಸೇವಕ ಸೇವಕರು ಈ ಒಂದು ಅಭಿಯಾನದಲ್ಲಿ ಭಾಗಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net