ಕಿಲ್ಲೂರು ಶಾಲೆಯಲ್ಲಿ ಎನ್‌ಎಸ್‌ಎಸ್ ಶಿಬಿರ

Bel_NSS
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಒಂದು ವಾರದ ವಾರ್ಷಿಕ ವಿಶೇಷ ಶಿಬಿರವು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ವಿವಿಧ ವಿಷಯಗಳ ಬಗ್ಗೆ ವಿದ್ಯಾರ್ಥಿ ಸ್ವಯಂಸೇವಕರಿಗೆ ಶೈಕ್ಷಣಿಕ ಕಾರ್ಯಕ್ರಮ ನಡೆಯಿತು.

ಉಜಿರೆಯ ಶ್ರೀ ಧ.ಮಂ ಸ್ವಾಯತ್ತ ಕಾಲೇಜಿನ ಸ್ನಾತ್ತಕೋತ್ತರ ರಸಾಯನಶಾಸ್ತ್ರ ವಿಭಾಗದ ಡಾ.ನವೀನ್ ಜೈನ್ ಹಾಗೂ ವಿದ್ಯಾರ್ಥಿಗಳಿಂದ ರಾಸಾಯನಿಕ ಇಂದ್ರಜಾಲ, ಬೆಳ್ತಂಗಡಿ ಆನ್ಸ್ ಕ್ಲಬ್ ಹಾಗೂ ಉಜಿರೆ ಮಹಿಳಾ ಮಂಡಳಿ ಸಹಭಾಗಿತ್ವದಲ್ಲಿ ಕಸದಿಂದ ರಸ ಕಾರ್ಯಕ್ರಮ, ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ದಿವ್ಯಕುಮಾರಿ ಅವರಿಂದ ಯುವಜನತೆ ಹಾಗೂ ಕೌಶಲ, ಶ್ರೀ ಧ.ಮಂ ಪ.ಪೂ ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕ ಮಹಾವೀರ ಜೈನ್ ಅವರಿಂದ ಗ್ರಾಮೀಣ ಆಟಗಳು, ಮುಂಡಾಜೆ ವಿವೇಕಾನಂದ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಅವರಿಂದ ಸೃಜನಶೀಲತೆ ಮತ್ತು ಗುರಿ ನಿರ್ಧಾರ, ಶ್ರೀ ಧ.ಮಂ ಯೋಗ ವಿಜ್ಞಾನ ಹಾಗೂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದ ಸ್ನಾತ್ತಕೋತ್ತರ ವಿದ್ಯಾರ್ಥಿ ಡಾ.ಮಂಜುನಾಥ ಎಚ್.ಆರ್. ಅವರಿಂದ ಭಾರತೀಯ ಆಹಾರ ಪದ್ಧತಿ, ಪತ್ರಕರ್ತ ಸಿನಾನ್ ಇಂದಬೆಟ್ಟು ಅವರಿಂದ ನನ್ನ ಭಾರತ-ನನ್ನ ಹೆಮ್ಮೆ, ಶ್ರೀ ಧ.ಮಂ ಪ.ಪೂ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಸ್ಮಿತಾ ಬೇಡೇಕರ್ ಅವರಿಂದ ಸುಲಭ ಇಂಗ್ಲೀಷ್, ಶ್ರೀ ಧ.ಮಂ ಐಟಿ ವಿದ್ಯಾರ್ಥಿ ದೇವಿಪ್ರಸಾದ್ ಅವರಿಂದ ಕಂಪ್ಯೂಟರ್ ಕಲಿಕೆ, ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದ ಸಂಶೋಧನಾ ಪ್ರಶಿಕ್ಷಕ ಡಾ.ರಕ್ಷಿತ್ ಅ.ಪ ಅವರಿಂದ ಭಾಷಾ ಮೋಜು ಎನ್ನುವ ಶೈಕ್ಷಣಿಕ ಕಾರ್ಯಕ್ರಮ ನಡೆಯಿತು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಕಾರ್ಯಕ್ರಮ ಸಂಯೋಜಿಸಿದರು. ಘಟಕದ ನಾಯಕರಾದ ಆದಿತ್ಯ ವಿ.ಹಾಗೂ ಪ್ರಾಪ್ತಿ ಗೌಡ ಮತ್ತು ವಿದ್ಯಾರ್ಥಿ ಸ್ವಯಂ ಸೇವಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net