ಕಲ್ಮಂಜ ಶಾಲೆಯಲ್ಲಿ ಎನ್ನೆಸ್ಸೆಸ್ ಶಿಬಿರ ಸಮಾರೋಪ

shibira
ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಕಲ್ಮಂಜ ಸರ್ಕಾರಿ ಪ್ರೌಢಶಾಲೆಯಲ್ಲಿ ಜರುಗಿತು
Published on

ಬೆಳ್ತಂಗಡಿ : ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ 2024- 25ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ ಕಲ್ಮಂಜ ಸರ್ಕಾರಿ ಪ್ರೌಢಶಾಲೆಯ ಜ್ಞಾನಾಮೃತ ಸಭಾಂಗಣದಲ್ಲಿ ಸೋಮವಾರ ಜರುಗಿತು.

ಗುರುದೇವ ಎಜುಕೇಶನ್ ಟ್ರಸ್ಟ್‌ನ ಸದಸ್ಯ ಪ್ರೀತಿತಾ ಧರ್ಮ ವಿಜೇತ್ ಅಧ್ಯಕ್ಷತೆ ವಹಿಸಿದ್ದರು. ಕಲ್ಮಂಜ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕಿ ಪೂರ್ಣಿಮಾ ಹಾಗೂ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಸವಿತಾ ಮುಖ್ಯಅತಿಥಿಗಳಾಗಿದ್ದರು.

ಕಲ್ಮಂಜ ಪ್ರೌಢಶಾಲೆ ಎಸ್‌ಡಿಎಂಸಿಯ ಕಾರ್ಯಾಧ್ಯಕ್ಷ ಮಂಜುನಾಥ್ ಶೆಟ್ಟಿ , ಗುರು ನಾರಾಯಣ ಸೇವಾ ಸಂಘದ ಅಧ್ಯಕ್ಷ ಜಯ ವಿಕ್ರಮ ಕಲ್ಲಾಪು, ಸರ್ಕಾರಿ ಪ್ರೌಢಶಾಲೆ ಕಲ್ಮಂಜ ಎಸ್‌ಡಿಎಂಸಿಮಾಜಿ ಅಧ್ಯಕ್ಷ ಕರುಣಾಕರ ಆಚಾರ್ಯ, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಸಹಯೋಜನಾಧಿಕಾರಿ ಸತೀಶ್ ಸಾಲಿಯಾನ್, ನಾಯಕಿ ಚಂದನ ನಾಯಕ ಮಿಥುನ್, ಶ್ರೀ ಗುರುದೇವಾ ಪ್ರಥಮದರ್ಜೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕವೃಂದ , ಕಚೇರಿ ಸಿಬ್ಬಂದಿ, ಹಿರಿಯ ಶಿಬಿರಾರ್ಥಿಗಳು, ಕಲ್ಮಂಜ ಸರ್ಕಾರಿ ಪ್ರೌಢಶಾಲೆಯ ಬೋಧಕ, ಭೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶ್ವೇತಾ ವರದಿ ವಾಚಿಸಿದರು. ಶಿಬಿರಾರ್ಥಿಗಳಾದ ದೀಕ್ಷಿತ್ ಹಾಗೂ ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು. ಯೋಜನಾಧಿಕಾರಿ ಬಿಎ ಶಮಿವುಲ್ಲಾ ಸ್ವಾಗತಿಸಿದರು. ಶಿಬಿರಾರ್ಥಿ ದೀಕ್ಷಿತ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net