

ಹಾಸನ: ತಾಲೂಕಿನ ಮೆಳಗೋಡು ಗ್ರಾಮದಲ್ಲಿ ಎನ್‌ಎಸ್‌ಎಸ್ ಶಿಬಿರ ಆಯೋಜನೆ ಮಾಡಿರುವುದು ಸಂತಸದ ವಿಷಯ ಎಂದು ನಿವೃತ್ತ ಯೋಧರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಕರೀಗೌಡ ಹೇಳಿದರು.
ಗ್ರಾಮದಲ್ಲಿ ಸುಮಾರು 60ಕ್ಕೂ ಹೆಚ್ಚು ಯೋಧರು ದೇಶ ಸೇವೆಗೆ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದಾರೆ. ಒಂದೇ ಗ್ರಾಮದಲ್ಲಿ 60ಕ್ಕೂ ಹೆಚ್ಚು ಸೈನಿಕರು ದೇಶ ಸೇವೆ ಮಾಡುತ್ತಿದ್ದಾರೆ. ಯುವ ಜನತೆ ಸಾಮಾಜಿಕ ಕೆಲಸಕ್ಕೆ ಹೆಚ್ಚು ಒತ್ತು ಕೊಡಬೇಕು ಎಂದು ಕರೆ ನೀಡಿದರು.
ಶಿಬಿರದ ಕಾರ್ಯಕ್ರಮಾಧಿಕಾರಿ ಸುಬ್ರಾಯ ಪ್ರಭು ಮಾತನಾಡಿ, ಶಿಬಿರಾರ್ಥಿಗಳಿಗೆ ಗ್ರಾಮಸ್ಥರು ಉತ್ತಮ ಸಹಕಾರ ನೀಡಿದ್ದಾರೆ ಎಂದು ಸಂತಸ ವ್ಯಕ್ತ ಪಡಿಸಿದರು.
ಮೆಳಗೋಡು ಗ್ರಾಮದ ನಿವೃತ್ತ ಯೋಧರು, ಗ್ರಾಮದ ಪ್ರಮುಖರು, ಶಿಬಿರಾರ್ಥಿಗಳು ಇದ್ದರು.