ಮೆಳಗೋಡು ಗ್ರಾಮದಲ್ಲಿ ಎನ್‌ಎಸ್‌ಎಸ್ ಶಿಬಿರ

ಮೆಳಗೋಡು ಗ್ರಾಮದಲ್ಲಿ ಎನ್‌ಎಸ್‌ಎಸ್ ಶಿಬಿರ
Published on

ಹಾಸನ: ತಾಲೂಕಿನ ಮೆಳಗೋಡು ಗ್ರಾಮದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರವನ್ನು ಹಾಸನ ಪಶುವೈದ್ಯಕೀಯ ಮಹಾವಿದ್ಯಾಲಯ ಡೀನ್ ಡಾ.ಒ.ಆರ್ ನಟರಾಜು ಇತ್ತೀಚೆಗೆ ಉದ್ಘಾಟಿಸಿದರು.

ಶಿಬಿರದಲ್ಲಿ ಹಾಸನ ಪಶು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಶ್ರಮದಾನ, ಸ್ವಚ್ಛತೆ ಬಗ್ಗೆ ಜಾಗೃತಿ, ಮನೋರಂಜನೆ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಶಿಬಿರಾರ್ಥಿಗಳು ಗ್ರಾಮದಲ್ಲಿ ಶ್ರಮದಾನ ಕೈಗೊಂಡು ಗ್ರಾಮದ ಆಂಜನೇಯ ದೇವಾಲಯ ಆವರಣವನ್ನು ಸ್ವಚ್ಛ ಮಾಡಿದರು. ರಸ್ತೆಗಳು ಹಾಗೂ ಚರಂಡಿಗಳನ್ನು ಶುಚಿಗೊಳಿಸಿ, ಗ್ರಾಮಸ್ಥರಲ್ಲಿ ನೈರ್ಮಲ್ಯ ಕುರಿತು ಜಾಗೃತಿ ಮೂಡಿಸಿದರು.

ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ.ಎಚ್. ಲೋಕೇಶ್, ಪಿಡಿಒ ಶೈಲಾ, ಅಂತಿಮ ಗೌಡ, ಯಾಲಕ್ಕಿಗೌಡ, ಗುರುರಾಜ್, ಮೋಹನ್, ವೆಂಕಟಶೆಟ್ಟಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net