

ಸುಬ್ರಹ್ಮಣ್ಯ: ವಿದ್ಯಾರ್ಥಿಗಳು ಸಮಾಜಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಲು ಶಿಬಿರ ಮುಖ್ಯ ಪಾತ್ರ ವಹಿಸುತ್ತದೆ ಎಂದು ಗುತ್ತಿಗಾರು ಗ್ರಾಪಂ ಅಧ್ಯಕ್ಷೆ ಸುಮಿತ್ರಾ ಮೂಕಮಲೆ ಹೇಳಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸಾಕೋಶ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ಗುತ್ತಿಗಾರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ಪ್ರಾಂಶುಪಾಲ ಡಾ.ದಿನೇಶ್ ಪಿ.ಟಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷೆ ಭಾರತಿ ಸಾಲ್ತಾಡಿ, ಪ್ರಾಂಶುಪಾಲೆ ಚೆನ್ನಮ್ಮ, ಕೆಎಸ್‌ಎಸ್ ಕಾಲೇಜಿನ ರಕ್ಷಕ ಶಿಕ್ಷಕರ ಸಂಘ ಅಧ್ಯಕ್ಷೆ ಸಾಯಿಗೀತ, ಎಸ್‌ಡಿಎಂಸಿ ಸದಸ್ಯ ಸುಧೀರ್ ಅಮೆ, ಕಾರ್ಯಾಧ್ಯಕ್ಷ ಕೇಶವ ಗೌಡ ಕಾಂತಿಲ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಆರತಿ ಕೆ, ಉಪನ್ಯಾಸಕಿ ಸುಮಿತ್ರಾ ಉಪಸ್ಥಿತರಿದ್ದರು. ಜೀವಿತ್ ಕಾರ್ಯಕ್ರಮ ನಿರೂಪಿಸಿದರು.