

ಕಾರ್ಕಳ: ರಾಷ್ಟ್ರಾದ್ಯಂತ ಎನ್ನೆಸ್ಸೆಸ್ ಶಿಬಿರಗಳು ವಿದ್ಯಾರ್ಥಿಗಳನ್ನು ಗ್ರಾಮೀಣ ಬದುಕಿಗೆ ಬೆಸೆಯುವ ಕೊಂಡಿ. ಆ ಮೂಲಕ ವಿದ್ಯಾರ್ಥಿಗಳಿಗೆ ಶಿಬಿರಗಳು ಗ್ರಾಮೀಣ ಬದುಕಿನ ಸೊಗಡನ್ನು ಬಿಚ್ಚಿಟ್ಟು ಶೈಕ್ಷಣಿಕ ಬದುಕಿಗೆ ಹೊಸ ರೂಪ ಕೊಡುತ್ತಿದೆ ಎಂದು ಎನ್‌ಎಂಎಎಂ ಇಂಜಿನಿಯರಿಂಗ್ ಕಾಲೇಜು ನಿಟ್ಟೆಯ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಗಣೇಶ ಪೂಜಾರಿ ಹೇಳಿದರು.
ಕಲಂಬಾಡಿ ಪದವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಎನ್ನೆಸ್ಸೆಸ್ ಶಿಬಿರಾಧಿಕಾರಿ ರವಿ ಜಿ. ಅವರನ್ನು ಸನ್ಮಾನಿಸಲಾಯಿತು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿಇಒ ದಿನೇಶ್ ಎಂ.ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ, ಉಡುಪಿ ಜಿಲ್ಲಾ ಎನ್ನೆಸ್ಸೆಸ್ ನೋಡಲ್ ಅಧಿಕಾರಿ ಡಾ.ಜಯ ಶಂಕರ ಕಂಗಣ್ಣಾರು, ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಟ್ರಸ್ಟಿಗಳಾದ ಅನಿಲ್ ಕುಮಾರ್ ಜೈನ್, ಸಿ.ಎ.ನಿತ್ಯಾನಂದ ಪ್ರಭು, ಆಡಳಿತ ಮಂಡಳಿ ಸದಸ್ಯ ಶಾಂತಿರಾಜ ಹೆಗ್ಡೆ, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂತೋಷ್, ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲೆ ಸಾಹಿತ್ಯ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಸ್ಟೂಡೆಂಟ್ ಅಫೇರ್ಸ್ ಶಕುಂತಳಾ ಎಂ.ಸುವರ್ಣ, ನಿಟ್ಟೆ ಗ್ರಾಪಂ ಉಪಾಧ್ಯಕ್ಷ ನಿತಿನ್ ಸಾಲ್ಯಾನ್, ಕಲಂಬಾಡಿ ಪದವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಜಯಂತ್ ನಾಯಕ್ ಉಪಸ್ಥಿತರಿದ್ದರು. ಮಣಿಪಾಲ ಜ್ಞಾನಸುಧಾ ಆಂಗ್ಲ ಭಾಷಾ ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.