ಉತ್ತಮ ಪ್ರಜೆಗಳಾಗಿ ಎನ್‌ಎಸ್‌ಎಸ್ ಸಹಕಾರಿ: ನಾಗರಾಜ ಪತ್ತಾರ್

4 HPT 2
Published on

ಹೊಸಪೇಟೆ: ಎನ್.ಎಸ್.ಎಸ್. ನಿಂದ ವಿದ್ಯಾರ್ಥಿಗಳು ಶಿಸ್ತು ಪ್ರಾಮಾಣಿಕತೆ ರೂಢಿಸಿಕೊಂಡು ಉತ್ತಮ ಪ್ರಜೆಗಳಾಗಲು ಸಾಧ್ಯವೆಂದು ನಿವೃತ್ತ ಉಪನ್ಯಾಸಕ ನಾಗರಾಜ ಪತ್ತಾರ್ ಅಭಿಪ್ರಾಯಪಟ್ಟರು.

ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ರಾಷ್ಟಿçÃಯ ಸೇವಾ ಯೋಜನಾ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಓದಿನೊಂದಿಗೆ ಸೇವಾಮನೋಭಾವ ಬೆಳೆಸಿಕೊಳ್ಳಬೇಕು. ರಾಷ್ಟçಭಕ್ತಿ, ದೇಶ ಪ್ರೇಮ ಹಾಗೂ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಎನ್‌ಎಸ್‌ಎಸ್ ತರಬೇತಿಗಳು ಪ್ರೇರಣಾದಾಯಕವಾಗಿವೆ ಎಂದು ಹೇಳಿದರು.

ಕಾಲೇಜಿನ ಹಿರಿಯ ಉಪನ್ಯಾಸಕ ಡಾ. ದಯಾನಂದ ಕಿನ್ನಾಳ್ ಮಾತನಾಡಿ, ಎನ್.ಎಸ್.ಎಸ್ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು, ಸೇವಾ ಮನೋಭಾವನೆಯನ್ನು ಹೆಚ್ಚಿಸುತ್ತವೆ. ಸೌಹಾರ್ದತೆ ಸಮಾನತೆ ಸರಳತೆ ಬೆಳೆಸುತ್ತ ಸಮಾಜ ಕಟ್ಟುವಲ್ಲಿ ಪ್ರೇರೇಪಿಸುತ್ತದೆ. ಹಾಡುಗಾರಿಕೆ, ಭಾಷಣ ಹಾಗೂ ಸಾಂಸ್ಕೃತಿಕ ನೃತ್ಯ ಸೇರಿದಂತೆ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಹೊರಹೊಮ್ಮಲು ಎನ್.ಎಸ್.ಎಸ್. ಅತ್ಯುತ್ತಮ ವೇದಿಕೆಯಾಗಿದೆ ಎಂದು ಅಭಿಪ್ರಾಯ ಪಟ್ಟರು.

ಅಧ್ಯಕ್ಷತೆ ವಹಿಸಿ ಪ್ರಾಚಾರ್ಯ ಜೆ. ಸಿದ್ರಾಮ ಮಾತನಾಡಿ, ಎನ್‌ಎಸ್‌ಎಸ್ ಸ್ವಯಂ ಸೇವಕರು ರಾಷ್ಟç ನಿರ್ಮಾಣದ ರೂವಾರಿಗಳು. ಗ್ರಾಮೀಣ ಭಾಗದ ಜನರಲ್ಲಿ ಆರೋಗ್ಯ, ಸ್ವಚ್ಛತೆ ಪ್ರಜ್ಞೆಯನ್ನು ಬೆಳೆಸುವಲ್ಲಿ ಎನ್‌ಎಸ್‌ಎಸ್ ಶಿಬಿರಗಳು ಪರಿಣಾಮಕಾರಿಯಾಗಿವೆ ಎಂದರು.

ವೇದಿಕೆ ಮೇಲೆ ಕಾಲೇಜಿನ ಪ್ರಾಚಾರ್ಯ ಸಿದ್ರಾಮ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾ ರಿ ವಿಜಯಭಾಸ್ಕರ್, ಉಪನ್ಯಾಸಕರಾದ ಡಾ.ದಯಾನಂದ ಕಿನ್ನಾಳ್, ಡಾ.ಪಾರ್ವತಿ, ಅನ್ಸರ್ ಬಾಷು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net